ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ.

ಹುಬ್ಬಳ್ಳಿ,ಜನವರಿ,12,2023(www.justkannada.in):  ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಬಂದಿರುವ ಪ್ರಧಾನಿ ಮೋದಿ ಅವರ ರೋಡ್ ಶೋ ವೇಳೆ ಭದ್ರತಾ ವೈಪಲ್ಯ ಕಂಡು ಬಂದಿದೆ.

ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಆಗಮಿಸಿದ  ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣದಿಂದ ರೈಲ್ವೆ ಮೈದಾನದವರೆಗೆ ರೋಡ್ ಶೋ ನಡೆಸಿದರು. ಈ  ವೇಳೆಯಲ್ಲಿ ಭದ್ರತಾ ಲೋಪ ಕಂಡು ಬಂದಿದೆ. ಭದ್ರತೆಯನ್ನು ಮೀರಿದ ಯುವಕನೋರ್ವ ಪ್ರಧಾನಿ ಮೋದಿಗೆ ಹಾರ ಹಾಕಲು ಯತ್ನಿಸಿದ್ದಾನೆ.  

ಇದನ್ನು ಗಮನಿಸಿದ  ಪೊಲೀಸರು ಕೂಡಲೇ ಯುವಕನನ್ನು ತಡೆದು ವಶಕ್ಕೆ ಪಡೆದಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

Key words: Security -lapse –during- Prime Minister- Modi- road show-hubli