Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಲೋಕಸಭೆಯಲ್ಲಿ ಭದ್ರತಾ ಲೋಪ: ಮತ್ತೆ ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ- ಕೇಂದ್ರ ಸಚಿವ ರಾಜನಾಥ್...

ಲೋಕಸಭೆಯಲ್ಲಿ ಭದ್ರತಾ ಲೋಪ: ಮತ್ತೆ ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ- ಕೇಂದ್ರ ಸಚಿವ ರಾಜನಾಥ್ ಸಿಂಗ್.

ನವದೆಹಲಿ,ಡಿಸೆಂಬರ್,14,2023(www.justkannada.in):  ನಿನ್ನೆ ಲೋಕಸಭೆಯಲ್ಲಿ ಉಂಟಾದ ಭದ್ರತಾ ವೈಪಲ್ಯ ಸಂಬಂಧ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂಸತ್ ನಲ್ಲಿ ಹೇಳಿಕೆ ನೀಡಿದ್ದಾರೆ.

ಇಂದು ಬೆಳಿಗ್ಗೆ ಲೋಕಸಭಾ ಕಲಾಪ ಆರಂಭವಾಗುತ್ತಿದ್ದಂತೆ ಧರಣಿಗಳಿದ ಪ್ರತಿಪಕ್ಷಗಳು ಘಟನೆ ಸಂಬಂಧ ಹೇಳಿಕೆ ನೀಡುವಂತೆ ಪಟ್ಟು ಹಿಡಿದವು. ಈ ವೇಳೆ ಲೋಕಸಭೆಯಲ್ಲಿ ಉತ್ತರಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇದು ದುರಾದೃಷ್ಠಕರ ಸಂಗತಿ.  ಮುಂದೆ ಇಂತಹ ಘಟನೆಗಳು ನಡೆಯದಂತೆ  ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಲೋಕಸಭೆಯಲ್ಲಿ ಭದ್ರತಾ ಲೋಪ: ಮತ್ತೆ ಇಂತಹ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್...

ಸರ್ಕಾರ ಹೇಳಿಕೆ ನೀಡುತ್ತಿರುವ ವೇಳೆಯೇ ಪ್ರತಿಪಕ್ಷದ ಸದಸ್ಯರು ಶೇಮ್, ಶೇಮ್ ಎಂಬ ಘೋಷಣೆ ಕೂಗಿ ಪ್ರತಿಭಟನೆಗಿಳಿದ ಹಿನ್ನೆಲೆ ಉಭಯ ಸದನಗಳ ಕಲಾಪವನ್ನು ಮುಂದೂಡಬೇಕಾಯಿತು.

Key words: Security lapse – Lok Sabha-Union Minister- Rajnath Singh.