ಮೈಸೂರು ವಿವಿ ಹಿಂದುಳಿದ ವರ್ಗಗಳ ಸಂಶೋಧನಾ ವಿದ್ಯಾರ್ಥಿಗಳ ವೇದಿಕೆಗೆ ಪದಾಧಿಕಾರಿಗಳ ಆಯ್ಕೆ

ಮೈಸೂರು ಮಾರ್ಚ್ 12, 2023 (www.justkannada.in): ಮೈಸೂರು ವಿಶ್ವವಿದ್ಯಾನಿಲಯ‌ದ ಹಿಂದುಳಿದ ವರ್ಗಗಳ ಸಂಶೋಧನಾ ವಿದ್ಯಾರ್ಥಿಗಳ ವೇದಿಕೆಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಮೈಸೂರು ವಿಶ್ವವಿದ್ಯಾನಿಲಯದ ಹಿಂದುಳಿದ ವರ್ಗಗಳ ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ ವತಿಯಿಂದ 2023-24ನೇ ಸಾಲಿನ ಪ್ರಪ್ರಥಮ ಪದಾಧಿಕಾರಿಗಳ ಹುದ್ದೆಗೆ ಹಿಂದುಳಿದ ವರ್ಗಗಳ ( OBC) ಸಂಶೋಧನಾ ವಿದ್ಯಾರ್ಥಿಗಳಿಂದ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಹುದ್ದೆಗಳಿಗೆ ಕಳೆದ  ಶುಕ್ರವಾರ ಆಯ್ಕೆ ಮಾಡಲಾಗಿದೆ.

ಅಧ್ಯಕ್ಷ ಸ್ಥಾನಕ್ಕೆ ಸಾರ್ವಜನಿಕ ಆಡಳಿತ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶಿವಶಂಕರ್ ಜಿ, ಉಪಾಧ್ಯಕ್ಷ ಸ್ಥಾನಕ್ಕೆ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನಾ ವಿದ್ಯಾರ್ಥಿ ವಿವೇಕ್ ಗೌಡ ಕೆ ಹಾಗೂ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಗಾಂಧಿ ಅಧ್ಯಯನ ಕೇಂದ್ರ ಸಂಶೋಧನಾ ವಿದ್ಯಾರ್ಥಿ ಪ್ರಸನ್ನಕುಮಾರ್ ಚಿಕ್ಕಳ್ಳಿ ಆಯ್ಕೆಯಾಗಿದ್ದಾರೆ.

ಮುಂದಿನ ದಿನಗಳಲ್ಲಿ ವೇದಿಕೆಗೆ ಅನುಗುಣವಾಗಿ ಕಾರ್ಯದರ್ಶಿ, ಖಜಾಂಚಿ ಮುಂತಾದ ಜವಾಬ್ದಾರಿಗಳಿಗೆ ಸದಸ್ಯರನ್ನು ನೇಮಿಸಲಾಗುವುದು ಹಾಗೂ ಹಿಂದುಳಿದ ವರ್ಗಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಸಿಗಬೇಕಾದ ಎಲ್ಲಾ ರೀತಿಯ ಸೌಲಭ್ಯ ಮತ್ತು ಸವಲತ್ತುಗಳನ್ನು ಒದಗಿಸುವ ಮೂಲಕ ಸಂಶೋಧನೆಗೆ ಪೂರಕವಾದ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತವೆ ನೂತನ ಪದಾಧಿಕಾರಿಗಳು ಭರವಸೆ ನೀಡಿದರು.