ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟ ರಾಜೇಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ: 3.30ರ ವೇಳೆಗೆ ಅಂತ್ಯಕ್ರಿಯೆ

ಬೆಂಗಳೂರು, ಫೆಬ್ರವರಿ 19, 2022 (www.justkannada.in): ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯ ಕುರಿತು ರಾಜೇಶ್ ಅಳಿಯ, ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ.

ರಾಜೇಶ್ ಅವರ ಕೊನೆಯ ದಿನಗಳ ಕುರಿತು ಮಾಹಿತಿ ನೀಡಿದ ಅರ್ಜುನ್ ಸರ್ಜಾ, ”10 ದಿನಗಳಿಂದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದರು. ಮೊದಲಿಗೆ ಪ್ರೋ ಕೋವಿಡ್ ಆಮೇಲೆ ಸಿಕೆಡಿ ಸಮಸ್ಯೆ ಆಗಿತ್ತು ಎಂದು ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ.

ವಿದ್ಯಾರಣ್ಯಪುರ ಸ್ವನಿವಾಸದಲ್ಲಿ ಪೂಜೆ ನಡೆಯಲಿದೆ. 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಏರ್ಪಾಟು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 3.30ಕ್ಕೆ ಮೇಡಿ ಅಗ್ರಹಾರ ಲಕ್ಷ್ಮೀಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಾರ್ವಜನಿಕರು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ದರ್ಶನ ಪಡೆಯಬಹುದು ಎಂದು ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ.