ನವದೆಹಲಿ, ಅಕ್ಟೋಬರ್, 19,2026 (www.justkannada.in): ಎದೆ ಸೋಂಕು ಹಾಗೂ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿಯ ಭೀಷ್ಮ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (98) ಅವರು ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಅಕ್ಟೋಬರ್ 16 ರಂದು ತೀವ್ರ ಎದೆ ಸೋಂಕು ಮತ್ತು ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಡ್ವಾಣಿ ಅವರನ್ನು ಜಸೋಲಾ ವಿಹಾರ್ ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುಗೆ ಸ್ಥಳಾಂತರಿಸಿ ತಜ್ಞ ವೈದ್ಯರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದೀಗ ಎಲ್ ಕೆ ಅಡ್ವಾಣಿ ಅವರು ಸಂಪೂರ್ಣ ಚೇತರಿಸಿಕೊಂಡಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಹಿರಿಯ ನರವಿಜ್ಞಾನಿ ಡಾ. ವಿನೀತ್ ಸೂರಿ ಅವರ ನೇತೃತ್ವದ ವೈದ್ಯರ ತಂಡ ಅವರಿಗೆ ಸೂಕ್ತ ಚಿಕಿತ್ಸೆ ನೀಡಿದ್ದು, ಆರೋಗ್ಯ ಸ್ಥಿರಗೊಂಡ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
Key words: Senior BJP leader, L.K. Advani, discharged, from, hospital






