Wednesday, September 2, 2026

BDA Apartments

Home Front Page ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೋವಿಡ್ ಗೆ ಬಲಿ…

ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೋವಿಡ್ ಗೆ ಬಲಿ…

ಕಲಬುರಗಿ,ಮೇ,13,2021(www.justkannada.in):  ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಕೊರೊನೊ ಸೊಂಕಿಗೆ ಬಲಿಯಾಗಿದ್ದಾರೆ.jk

ವಾರದ ಹಿಂದೆ ಕೊರೊನೊ ಸೊಂಕಿಗೆ ಒಳಗಾಗಿದ್ದ ಜಯತೀರ್ಥ ಕಾಗಲಕರ್ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಗೆ ಸ್ಪಂದಿಸದೇ ಕೊನೆಯುಸಿರೆಳೆದರು.

ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಾ  ಇತ್ತೀಚಿಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು.senior-journalist-jayatheertha-kagalakar-death-covid

ಮೂರು ದಶಕಗಳಿಂದ ಹಲವು ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದ್ದ ಕಾಗಲಕರ್ ಅವರ ಅಗಲುವಿಕೆಗೆ ಸಂಸದರು, ಶಾಸಕರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.

Key words: Senior journalist –Jayatheertha Kagalakar –death-covid.