ನಾಳೆ ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ‘ಸುದ್ದಿ ಬರಹ ಮತ್ತು ವರದಿಗಾರಿಕೆ’ ಪುಸ್ತಕ ಬಿಡುಗಡೆ ಸಮಾರಂಭ…

ಮೈಸೂರು,ನವೆಂಬರ್,25,2020(www.justkannada.in):  ನಾಳೆ (ನ.26) ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ‘ಸುದ್ದಿ ಬರಹ ಮತ್ತು ವರದಿಗಾರಿಕೆ’ ಪುಸ್ತಕ ಬಿಡುಗಡೆ ಸಮಾರಂಭವನ್ನ ಆಯೋಜಿಸಲಾಗಿದೆ.I didn't knew CM BSY will think so cheaply - KPCC President D.K. Shivakumar

ನಾಳೆ ಬೆಳಿಗ್ಗೆ 9.30ಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ, ಶ್ರೀ ರಾಜಶೇಖರ ಕೋಟಿ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.  ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ ದೇವೇಗೌಡರು ಪುಸ್ತಕ ಬಿಡುಗಡೆ ಮಾಡಲಿದ್ದು, ‘ಸುದ್ದಿ ಬರಹ ಮತ್ತು ವರದಿಗಾರಿಕೆ’ ಪುಸ್ತಕದ ಬಗ್ಗೆ ಮೈಸೂರು ವಿಶ್ವ ವಿದ್ಯಾನಿಲಯ ಪತ್ರಿಕೋದ್ಯಮ ಮತ್ತ ಸಂವಹನ ವಿಭಾಗದ ಪ್ರಾಧ್ಯಾಪಕರಾದ ಡಾ. ನಿರಂಜನ ವಾನಳ್ಳಿ ಅವರು ಮಾತನಾಡಲಿದ್ದಾರೆ.senior-journalist-kudli-gururaja-baraha-mattu-varadigarike-book-release-tomorrow

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ ರವಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪುಸ್ತಕ ರಚಿಸಿರುವ ಹಿರಿಯ ಪತ್ರಕರ್ತ ಕೂಡ್ಲಿ ಗುರುರಾಜ ಮತ್ತು ಪ್ರಕಾಶಕರಾದ ಡಿ.ಎನ್ ಲೋಕಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.

Key words: Senior journalist -Kudli Gururaja- baraha mattu varadigarike- book-release- tomorrow.