ಹಿರಿಯ ಪತ್ರಕರ್ತ ನಿರಂಜನ್ ನಿಕ್ಕಂ ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ

ಮೈಸೂರು,ಫೆಬ್ರವರಿ,17,2021(www.justkannada.in) : ಹಿರಿಯ ಪತ್ರಕರ್ತ ನಿರಂಜನ್ ನಿಕ್ಕಂ ಅವರ ನಿಧನ ತೀವ್ರ ದುಃಖ ತಂದಿದೆ. ತಮ್ಮ ವರದಿಗಾರಿಕೆಯಲ್ಲಿ ನಿಷ್ಪಕ್ಷಪಾತ ಧೋರಣೆ ಹೊಂದಿದ ಅವರು, ಪತ್ರಿಕಾ ರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಈ ಮೂಲಕ ಹಲವರಿಗೆ ಮಾರ್ಗದರ್ಶಕರಾಗಿದ್ದರು ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ ಸೂಚಿಸಿದ್ದಾರೆ.jkಸಮಾಜದ ಅಂಕುಡೊಂಕುಗಳನ್ನು ತೋರಿಸುವ ಅವರ ಅನೇಕ ವರದಿಗಳು ಸರ್ಕಾರದ ಗಮನ ಸೆಳೆದಿದ್ದವು. ಸ್ಟಾರ್ ಆಫ್ ಮೈಸೂರು, ಡೆಕ್ಕನ್ ಹೆರಾಲ್ಡ್ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದ ನಿರಂಜನ್ ಅವರು, ಡೆಕ್ಕನ್ ಹೆರಾಲ್ಡ್ ಮೈಸೂರು ಆವೃತ್ತಿಯ ಸ್ಥಾನಿಕ ಸಂಪಾದಕರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು.

ವಿಜ್ಞಾನ-ತಂತ್ರಜ್ಞಾನಗಳ ಬಗೆಗಿನ ವರದಿಗಳನ್ನು ನೀಡುವ ಮೂಲಕ ಹೊಸ ಆವಿಷ್ಕಾರಗಳ ಬಗ್ಗೆ ಬೆಳಕು ಚೆಲ್ಲುತ್ತಿದ್ದರು. ಇಷ್ಟಲ್ಲದೆ ಬೋಧಕರಾಗಿದ್ದ ಅವರು ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಉಪನ್ಯಾಸಗಳನ್ನು ನೀಡಿ ಶೈಕ್ಷಣಿಕ ಕ್ಷೇತ್ರದಲ್ಲೂ ಸಂಪನ್ಮೂಲ ವ್ಯಕ್ತಿಯಾಗಿದ್ದರು. Senior-journalist-Niranjan Nikkam-death-Minister S.T.Somashekhar-condolences

ಇಂಥ ಒಬ್ಬ ಬಹುಮುಖವ್ಯಕ್ತಿತ್ವದ ಪತ್ರಕರ್ತರಾಗಿದ್ದ ನಿರಂಜನ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ.

key words : Senior-journalist-Niranjan Nikkam-death-Minister S.T.Somashekhar-condolences