Tuesday, September 22, 2026

BDA Apartments

ಹಿರಿಯ ಸಾಹಿತಿ ಗೀತಾ ನಾಗಭೂಷಣ್(78) ಇನ್ನಿಲ್ಲ… BDA JK_Adv BDA Adv
Home Front Page ಹಿರಿಯ ಸಾಹಿತಿ ಗೀತಾ ನಾಗಭೂಷಣ್(78) ಇನ್ನಿಲ್ಲ….

ಹಿರಿಯ ಸಾಹಿತಿ ಗೀತಾ ನಾಗಭೂಷಣ್(78) ಇನ್ನಿಲ್ಲ….

ಕಲಬುರಗಿ,ಜೂ,29,2020(www.justkannada.in): ಹಿರಿಯ ಸಾಹಿತಿ ಗೀತಾ ನಾಗಭೂಷಣ್ (78) ಹೃದಯಾಘಾತದಿಂದ  ನಿಧನರಾಗಿದ್ದಾರೆ

ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗೀತಾ ನಾಗಭೂಷಣ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಲಬುರಗಿ ನಗರದ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದ ಗೀತಾ ನಾಗಭೂಷಣ್ ನಾಡೋಜ ಮತ್ತು ಕೇಂದ್ರ ಸಾಹಿತ್ಯ ಅಕಾಡಮಿ ಪುರಸ್ಕೃತೆಯಾಗಿದ್ದರು.Senior writer -Geeta Nagabhushan (78) -no more.

2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಗೀತಾ ನಾಗಭೂಷಣ ಅವರು ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿಯಾಗಿದ್ದಾರೆ.ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ ಕೂಡಾ ಹೌದು. ಇವರ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಎಂಬ ಹೆಗ್ಗಳಿಕೆಯೂ ಇವರದ್ದೇ ಆಗಿದೆ.

Key words: Senior writer -Geeta Nagabhushan (78) -no more.