ಜಮ್ಮು-ಕಾಶ್ಮಿರದಲ್ಲಿ ಸರಣಿ ಬಾಂಬ್ ಸ್ಫೋಟ: ಭಾರತ್ ಜೋಡೋ ಯಾತ್ರೆಯಲ್ಲಿ ಬದಲಾವಣೆ ಇಲ್ಲ

ಬೆಂಗಳೂರು, ಜನವರಿ 22, 2022 (www.justkannada.in): ಜಮ್ಮು-ಕಾಶ್ಮಿರದಲ್ಲಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸುತ್ತಿದ್ದರೂ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ಮೇಲೆ ಯಾವ ಪರಿಣಾಮ ಬೀರುವುದಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ.

ಕಾಂಗ್ರೆಸ್ ಯಾತ್ರೆಯ ಪಯಣದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ (ಜೆಕೆಪಿಸಿಸಿ) ವಕ್ತಾರ  ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಕಥುವಾ ಜಿಲ್ಲೆಯ ಹೀರಾನಗರ ಮೋರ್‌ನಿಂದ ಸಾಂಬಾದ ದುಗ್ಗರ್ ಹವೇಲಿಯವರೆಗೆ ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸಿದ್ದಾರೆ.

ಯಾತ್ರೆಯು ವೇಳಾಪಟ್ಟಿಯ ಪ್ರಕಾರ ಮುಂದುವರಿಯುತ್ತಿದೆ. ಹಾಗೇಯೇ ಮುಂದೆಯೂ ಮುಂದುವರೆಯಲಿದೆ. ಜಮ್ಮು ನಗರದಲ್ಲಿ ನಡೆದ ಅವಳಿ ಸ್ಫೋಟಗಳ ಕಾರಣ ಖಂಡಿತವಾಗಿಯೂ ನಮಗೆಲ್ಲರಿಗೂ ತೀವ್ರ ಕಳವಳಕ್ಕೆ ನೂಕಿದೆ. ಆದರೆ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ.