ನಾಳೆ ವಿಧಾನ ಮಂಡಲ ಅಧಿವೇಶನ ಹಿನ್ನೆಲೆ: ಇಂದು ಅಧಿಕಾರಿಗಳು ಮತ್ತು ಸಚಿವರ ಜತೆ ಸಿಎಂ ಬಿಎಸ್ ವೈ ಸಭೆ…

ಬೆಂಗಳೂರು,ಅ,9,2019(www.justkannada.in):  ನಾಳೆಯಿಂದ  ವಿಧಾನಮಂಡಲ ಅಧಿವೇಶನ ಶುರುವಾಗಲಿದ್ದು, ಈ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಸಂಜೆ ಅಧಿಕಾರಿಗಳು ಮತ್ತು ಸಚಿವರ ಜತೆ ಸಭೆ ನಡೆಸಲಿದ್ದಾರೆ.

ವಿಪಕ್ಷಗಳು  ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧವಾಗಿವೆ. ಪ್ರತಿಪಕ್ಷಗಳು ಪ್ರವಾಹ ಪರಿಹಾರ, ಕೇಂದ್ರದಿಂದ ಹಣ ಬಿಡುಗಡೆ ವಿಳಂಬ, ವರ್ಗಾವಣೆ, ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಿಬಿಐಗೆ ವಹಿಸಿರುವ ಅಂಶಗಳನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ ಎನ್ನಲಾಗಿದೆ.

ಈ ಹಿನ್ನೆಲೆ ನೆರೆ ಪರಿಹಾರ ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳು ಮತ್ತು ಸಚಿವರ ಜತೆ ಇಂದು ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.

 

Key words: session-CM BS Yeddyurappa- meeting -officials – ministers- today.