ನಾನೂ ಶೂದ್ರ-ನೀವೂ ಶೂದ್ರರು, ರವಿಕುಮಾರ್ ಕೂಡ ಶೂದ್ರರು: ಯಾಕ್ರೀ ಇದೆಲ್ಲಾ: ಸಿಎಂ ಸಿದ್ದರಾಮಯ್ಯ.

ಬೆಂಗಳೂರು,ಫೆಬ್ರವರಿ, 21,2024(www.justkannada.in):  ನಾನೂ ಶೂದ್ರ-ನೀವೂ ಶೂದ್ರರು, ರವಿಕುಮಾರ್ ಕೂಡ ಶೂದ್ರರು. ಹೀಗಿದ್ದೂ ಯಾಕ್ರೀ ಇದೆಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯ ಶ್ರೀನಿವಾಸ್ ಪೂಜಾರಿ ಮತ್ತು ರವಿಕುಮಾರ್ ಅವರನ್ನು ಪ್ರಶ್ನಿಸಿದರು.

ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ಈ ರೀತಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಂವಿಧಾನ ಜಾರಿಯ ಮುನ್ನಾ ದಿನ ಅಂಬೇಡ್ಕರ್ ಅವರು ಪಾರ್ಲಿಮೆಂಟಿನಲ್ಲಿ ಮಾಡಿದ ಭಾಷಣದ ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ವಿವರವಾಗಿ ಮಾತನಾಡಿದರು. ಈ ವೇಳೆ ತಮ್ಮ ಮಾತಿಗೆ ಮಧ್ಯ ಪ್ರವೇಶಿಸಿದ ಪೂಜಾರ್ ಮತ್ತು ರವಿಕುಮಾರ್ ಅವರಿಗೆ ನಾವೂ ಶೂದ್ರರು, ನೀವೂ ಶೂದ್ರರು ಎನ್ನುವುದನ್ನು ನೆನಪಿಸಿದರು.

ಪ್ರಬಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ. ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಿದರು.

ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮಾತನ್ನು ಉಲ್ಲೇಖಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜೆಡಿಎಸ್ ಸದಸ್ಯ ಬೋಜೇಗೌಡರು ಕುವೆಂಪು ಅವರ ಮಾತನ್ನು ಮುಂದುವರೆಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ” ಕುವೆಂಪು ಆಶಯ ಇಟ್ಟುಕೊಂಡು ಇನ್ನೂ ಬಿಜೆಪಿ-ಜೆಡಿಎಸ್ ಜತೆಗಿದ್ದೀರಿ ಏಕೆ ಎಂದು ಪ್ರಶ್ನಿಸಿದರು. ಜತೆಗೆ ಈಗ ನಿಮ್ಮದು JD “S” ಅಲ್ಲ ಈಗ JD “C” ಆಗಿದೆ ಅಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರು C ಫಾರ್ ಕಮ್ಯುನಲ್ ಎಂದು ಟೇಬಲ್ ಬಡಿದರು.

ಈ ಮಧ್ಯೆ ಬಿಜೆಪಿಯ ರವಿಕುಮಾರ್ ಅವರು ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕಿವಿಯಲ್ಲಿ ಏನೋ ಹೇಳುತ್ತಿದ್ದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ರವಿಕುಮಾರ್ ಅವರೇ RSS ಹೇಳಿಕೊಟ್ಟಿದ್ದನ್ನೆಲ್ಲಾ ನೀವು ಆಮೇಲೆ ಹೇಳಿಕೊಡಿ. ನಾನು ಮಾತು ಮುಗಿಸಲು ಬಿಡಿ ಎಂದು ತಿಳಿಸಿದರು.

ENGLISH SUMMARY..

I am a Shudra-You are also a Shudra-Ravikumar is also a Shudra: Why all this: CM

Bangalore Feb 21: Chief Minister Siddaramaiah questioned BJP’s Srinivas Poojari and Ravikumar saying “I am a Shudra – you are also a Shudra – Ravikumar is also a Shudra., then why all this”
He asked this while replying to the debate on the Governor’s address in the Legislative Council.
The chief minister was speaking in detail about the important points of Ambedkar’s speech in the Parliament on the eve of adoption of the Constitution. Kota Shrinivasa Poojari and Ravikumar intervened and reminded him that we too are Shudras and you too are Shudra.
A strong opposition is complementary to democracy. On the same occasion, he mentioned that Operation Kamala is dangerous for democracy.
He referred to Kuvempu’s ‘sarvodayavagali sarvarali’. Responding to this, JDS member Boje Gowda continued Kuvempu’s speech.
The Chief Minister asked, “Why are you still with BJP-JDS while keeping the aspirations of Kuvempu. Your party is not JD “S” but now it is JD “C”. To this the Congress members hit the table saying C for Communal.
In the meantime, BJP’s Ravikumar was whispering something to the leader of the opposition Poojary, to which the CM said “Ravikumar, you can teach all that RSS has taught you later, Let me finish”.

Key words: session-CM-Siddaramaiah- Shudra- Ravikumar