ಫೆ.10ರಿಂದ ವಿಧಾನಮಂಡಲ ಅಧಿವೇಶನ: ಫೆ.17 ರಂದು ರಾಜ್ಯ ಬಜೆಟ್- ಸಚಿವ ಮಾಧುಸ್ವಾಮಿ ಮಾಹಿತಿ.

ಬೆಂಗಳೂರು,ಜನವರಿ,20,2023(www.justkannada.in):  ಫೆಬ್ರವರಿ 10ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಫೆಬ್ರವರಿ 17 ರಂದು ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ  ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ, ಫೆಬ್ರವರಿ 17 ರಂದು ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ 10 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಎಷ್ಟು ದಿನ ಅಧೀವೇಶನ  ನಡೆಯಲಿದೆ ಎಎಂದು ಬಿಎಸಿ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.

ಲೋಕೋಪಯೋಗಿ ಇಲಾಖೆವತಿಯಿಂದ 100 ಅಂಬೇಡ್ಕರ್ ವಸತಿ ನಿಲಯ ನಿರ್ಮಾಣಕ್ಕೆ 600 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ.  ಬೆಂಗಳೂರು ನಗರದ ಕಲಾಸಿಪಾಳ್ಯದಲ್ಲಿ ನವೀನ ಬಸ್ ನಿಲ್ದಾಣ ನಿರ್ಮಾಣಕ್ಕೆ 63 ಕೋಟಿ ರೂ. ಅನುಮೋದನೆ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆಯಲ್ಲಿ ಸ್ಪೂರ್ತಿ ಯೋಜನೆಗೆ 12.5 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ನಾರಯಣ ಗುರು ಹೆಸರಲ್ಲಿ ಹಿಂದುಳಿದ ವರ್ಗಗಳ ಶಾಲಾ ನಿರ್ಮಾಣಕ್ಕೆ 72 ಕೋಟಿ ರೂ. ನೀಡಲಾಗಿದೆ ಎಂದು ಜೆ.ಸಿ ಮಾಧುಸ್ವಾಮಿ ತಿಳಿಸಿದರು.

ಕಲ್ಲು ಗಣಿ ಗುತ್ತಿಗೆ ಮಂಜೂರಾತಿಯಡಿ ಕ್ವಾರಿ ಲೀಸ್ ಕೊಡುತ್ತಿದ್ದೇವೆ. ಎಷ್ಟು ಲೀಸ್ ಕೊಟ್ಟಿದ್ದೀವಿ ಅದರ ಜೊತೆ ನಕ್ಷೆಗಿಂತ ಸ್ವಲ್ಪ ಹೆಚ್ಚು ಕಡಿಮೆಯಾದರು ಅನುಮತಿ ನೀಡುವ ಅಧಿಕಾರವನ್ನು ಅಧಿಕಾರಿಗಳಿಗೆ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.

Key words:  Session – Feb 10-State Budget – Feb 17-Minister -Madhuswamy