ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ ಸಮರ್ಪಿಸಲು ದಿನಾಂಕ ನಿಗದಿ.

ಮೈಸೂರು,ಜುಲೈ,29,2021(www.justkannada.in): ತುಂಬಿ ತುಳುಕುತ್ತಿರುವ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿಗಳಿಂದ ಬಾಗಿನ ಸಮರ್ಪಿಸಲು ದಿನಾಂಕ ನಿಗದಿಯಾಗಿದೆ ಎಂದು ಹೆಚ್ ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರುವ ಆಗಸ್ಟ್‌ 10ರಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.ಈ ಬಗ್ಗೆ ಸರ್ಕಾರದಿಂದ ಮಾಹಿತಿ ಲಭ್ಯವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಬಿನಿ ಜಲಾಶಯಕ್ಕೆ ಆಗಮಿಸುವ ವೇಳೆ ಹೆಚ್ ಡಿ ಕೋಟೆ ಕ್ಷೇತ್ರದ ಸಮಸ್ಯೆಗಳನ್ನು ಗಮನಕ್ಕೆ ತಂದು, ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಆಗ್ರಹಿಸಲಾಗುವುದು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

Key words: Set -date – Kabini Reservoir-bagina-submit-CM-MLA-Chikkamadu