ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ : ಐವರ ವಿರುದ್ಧ FIR ದಾಖಲು

ಬೆಂಗಳೂರು ,ಸೆಪ್ಟಂಬರ್,20,2025(www.justkannada.in):  ಬೆಂಗಳೂರು ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ  ನೀಡಿದ ಆರೋಪದ ಮೇಲೆ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರು ವಿವಿಉಪನ್ಯಾಸಕರಾದ ಸ್ವರೂಪ ಕುಮಾರ್, ರಾಮಾಂಜನೇಯ ಸೇರಿದಂತೆ ಐವರು ಅತಿಥಿ ಉಪನ್ಯಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾದ ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿದ್ದು, ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರೇ ಕುಡಿದು ಡ್ಯಾನ್ಸ್ ಮಾಡುವ ವಿಡಿಯೋ ಬಹಿರಂಗವಾಗಿದೆ.  ಅತಿಥಿ ಉಪನ್ಯಾಸಕ ರಾಮಾಂಜನೇಯ ಕುಡಿದು ಬೆಂಗಳೂರು ವಿವಿ ಆವರಣದಲ್ಲೇ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.

Key words: Guest lecturer, accused , sexual harassment, FIR