Sunday, August 23, 2026

BDA Apartments

Home Crime ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್ : ಬ್ರಿಜ್ ಭೂಷಣ್ ಶರಣ್ ಸಿಂಗ್ ​ಗೆ ಮಧ್ಯಂತರ ಜಾಮೀನು...

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್ : ಬ್ರಿಜ್ ಭೂಷಣ್ ಶರಣ್ ಸಿಂಗ್ ​ಗೆ ಮಧ್ಯಂತರ ಜಾಮೀನು ಮಂಜೂರು..

ನವದೆಹಲಿ,ಜುಲೈ,18,2023(www.justkannada.in):  ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ದೆಹಲಿ ರೋಜ್ ಅವೆನ್ಯೂ ಕೋರ್ಟ್ ಮಧ್ಯಂತರ ಜಾಮೀನು  ಮಂಜೂರು ಮಾಡಿದೆ.

ತಲಾ 25 ಸಾವಿರ ರೂಪಾಯಿ ಬಾಂಡ್ ಮೇಲೆ  ದೆಹಲಿಯ ರೋಜ್ ಅವೆನ್ಯೂ  ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇನ್ನೂ ಡಬ್ಲ್ಯುಎಫ್‌ಐನ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್‌ಗೂ ಮಧ್ಯಂತರ ಜಾಮೀನು ನೀಡಲಾಗಿದೆ.

ಜೂನ್ 2 ರಂದು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪಗಳ ಆಧಾರದ ಮೇಲೆ ಎರಡು ಎಫ್‌ಐಆರ್ ಮತ್ತು 10 ದೂರುಗಳನ್ನು ದಾಖಲಿಸಿದ್ದಾರೆ.  ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಮ್ಮ ಮೇಲಿರುವ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ.

Key words:  sexual harassment – wrestlers- case -Brij Bhushan Sharan Singh -granted -interim -bail.