ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಪುತ್ರನನ್ನು ಭೇಟಿ ಮಾಡಿದ ಶಾರುಕ್ ಖಾನ್

ಬೆಂಗಳೂರು, ಅಕ್ಟೋಬರ್ 21, 2021 (www.justkannada.in): ನಟ ಶಾರುಕ್ ಖಾನ್ ಅವರು ಇಂದು ಮುಂಬೈನ ಆರ್ಥರ್ ರೋಡ್ ಜೈಲಿಗೆ ತೆರಳಿ ಮಗ ಆರ್ಯನ್ ಖಾನ್ ಭೇಟಿ ಮಾಡಿ ಮಾತುಕತೆ ನಡೆಸಿದರು.

ಆರ್ಯನ್ ಖಾನ್ ಬಂಧನದ ಬಳಿಕ ಇದೇ ಮೊದಲ ಬಾರಿಗೆ ಮಗನನ್ನು ಭೇಟಿಯಾಗಿದ್ದಾರೆ. 20 ನಿಮಿಷ ಮಾತುಕತೆ ನಡೆಸಿ ಧೈರ್ಯತುಂಬಿದ್ದಾರೆ.

ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಆರ್ಯನ್ ಖಾನ್ ಅಕ್ಟೋಬರ್ 2ರಿಂದ ಜೈಲಿನಲ್ಲಿದ್ದಾರೆ. ನಿನ್ನೆ ನ್ಯಾಯಾಲಯವು ಅವರಿಗೆ ಜಾಮೀನು ನಿರಾಕರಿಸಿತ್ತು.

ಆರ್ಯನ್ ಖಾನ್‌ಗೆ ಎರಡು ಬಾರಿ ಜಾಮೀನು ನಿರಾಕರಿಸಲಾಗಿದ್ದು, ಈಗ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅವರ ನ್ಯಾಯಾಂಗ ಬಂಧನ ಇಂದಿಗೆ ಕೊನೆಗೊಳ್ಳುತ್ತದೆ.