ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆ: ಕಲಾಪ ನಾಳೆ ಮುಂದೂಡಿಕೆ

ಬೆಳಗಾವಿ,ಡಿಸೆಂಬರ್,15,2025 (www.justkannada.in): ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನೆಲೆಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಕಲಾಪವನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

ವಿಧಾನಸಭೆಯಲ್ಲಿ ಇಂದು ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಇಂದು ಶ್ಯಾಮನೂರು ಅವರ ಅಂತ್ಯಕ್ರಿಯೆಯಲ್ಲಿ ಎಲ್ಲಾ ಸಚಿವರು ಶಾಸಕರು ವಿರೋಧ ಪಕ್ಷದವರು ಭಾಗಿಯಾಗಲಿದ್ದಾರೆ. ಇಂದು ಕಲಾಪ ಆರಂಭವಾದ ವೇಳೆ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಆರ್ ಅಶೋಕ್ ಸಚಿವರಾದ ಕೆ ಎಚ್ ಮುನಿಯಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದರು. ಬಳಿಕ ಕಲಾಪವನ್ನ ನಾಳೆಗೆ ಮುಂದೂಡಿಕೆ ಮಾಡಲಾಯಿತು.

ಇಂದು ಸಂಜೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನಡೆಯಲಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ , ಸ್ಪೀಕರ್ ಯು.ಟಿ ಖಾದರ್ ಸೇರಿ ಹಲವು ನಾಯಕರು ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Key words: death, Shamanur Shivashankarappa, Session,  adjourned