Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಶಾಮನೂರು ಶಿವಶಂಕರಪ್ಪ ಒತ್ತಾಯ.

ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಶಾಮನೂರು ಶಿವಶಂಕರಪ್ಪ ಒತ್ತಾಯ.

ದಾವಣಗೆರೆ,ನವೆಂಬರ್,10,2023(www.justkannada.in): ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆ  ಮಾಡುವಂತೆ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದ್ದಾರೆ.

ಜಾತಿ ಜನಗಣತಿ ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಸರ್ಕಾರದ ಬಳಿ ಹಳೇ ವರದಿ ಇದೆ, ಹೊಸದಾಗಿ ಮಾಡಲು ಹೇಳಿದ್ದೇನೆ. ಪಂಚಮಸಾಲಿ ಸಮಾಜಕ್ಕೆ ಒಳ್ಳೆಯದಾಗಲೆಂದು ಹೋರಾಟ ಮಾಡುತ್ತಿದ್ದಾರೆ. ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಒತ್ತಾಯಿಸುತ್ತೇವೆ. ಡಿಸೆಂಬರ್,23  ಮತ್ತು 24 ರಂದು ದಾವಣಗೆರೆಯಲ್ಲಿ 2 ಲಕ್ಷ ಜನರು ಸೇರುತ್ತಾರೆ ವೀರಶೈವ ಲಿಂಗಾಯದ ಸಮಾವೇಶದಲ್ಲಿ ಚರ್ಚೆ ಮಾಡುತ್ತೇವೆ ಎಂದರು.

ಇಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪೂರ್ವಭಾವಿ ಸಭೆ ಇತ್ತು. ಹೈಕಮಾಂಡ್ ಏನ್ ತೀರ್ಮಾನ ಮಾಡುತ್ತೋ ಅವರಿಗೆ ಬಿಟ್ಟಿದ್ದು.  ನಾವು ಗೆದ್ದಿದದ್ದೇವಲ್ಲಾ ಹುಮ್ಮಸ್ಸು ಇದೆ ಆಕಾಂಕ್ಷಿಗಳು ಹೆಚ್ಚಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದರು.

Key words:  Shamanur Shivshankarappa -insisted – inclusion – Lingayat community – OBC list