ಶಾಮನೂರು ಶಿವಶಂಕರಪ್ಪ ಭೇಟಿ ವಿಚಾರದಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಜೂನ್,14,2023(www.justkannada.in): ಶಾಮನೂರು ಶಿವಶಂಕರಪ್ಪ ಭೇಟಿ ವಿಚಾರದಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ ಎಂದು  ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಿನ್ನೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ  ಭೇಟಿಯಾಗಿ ಮಾತುಕತೆ ನಡೆಸಿದ್ದರು ಎನ್ನಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು.  ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ ಎಂದಿದ್ದಾರೆ.

ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ‌ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೊಪರಿ ಮಾತನಾಡಿದ್ದು ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ. ಸ್ನೇಹ ಸಂಬಂಧಗಳೇ ಬೇರೆ ರಾಜಕೀಯ ಸಂಬಂಧವೇ ಬೇರೆ ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು  ಬಸವರಾಜ ಬೊಮ್ಮಾಯಿ ತಿಳಿಸಿದರು.

Key words: Shamanur Shivshankarappa-meet -Former CM- Basavaraja Bommai.