ಕೊರೊನಾ ಕಾಟಕ್ಕೆ ‘ಅವತಾರ ಪುರುಷ’ ಥಿಯೇಟರ್’ಗೆ ಬರುವುದು ತಡವಾಗಲಿದೆ!

ಬೆಂಗಳೂರು, ಏಪ್ರಿಲ್ 29, 2021 (www.justkannada.in): ಶರಣ್‌ ಮತ್ತು ಆಶಿಕಾ ರಂಗನಾಥ್‌ ನಟನೆಯ ಅವತಾರ ಪುರುಷ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಚಿತ್ರ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ.

ಚಿತ್ರ ಬಿಡುಗಡೆಗೆ ಸಾಕಷ್ಟು ಸಿದ್ಧತೆಗಳನ್ನು ನಡೆಸಲಾಗಿತ್ತು. ಆದರೆ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲು ಸಾಧ್ಯವಿಲ್ಲ ಎಂದು ಪುಷ್ಕರ್ ಮಲ್ಲಿಕಾರ್ಜುನಯ್ಯ ತಿಳಿಸಿದ್ದಾರೆ.