ಶರತ್ ಬಚ್ಚೇಗೌಡ ಸೋಲು ಕಟ್ಟಿಟ್ಟ ಬುತ್ತಿ, ಸಿದ್ದರಾಮಯ್ಯ ದೂರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ

ಮೈಸೂರು, ನವೆಂಬರ್ 17, 2019 (www.justkannada.in): ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ವಿರುದ್ದ ಬಂಡಾಯ ಸ್ಪರ್ಧೆ ಮಾಡಿರುವ ಶರತ್ ಬಚ್ಚೇಗೌಡರನ್ನು ಪಕ್ಷದಿಂದ ಉಚ್ಚಾಟಿಸಲಾಗುವುದು. ಶರತ್ ಬಚ್ಚೇಗೌಡ ನೂರಕ್ಕೆ ನೂರರಷ್ಟು ಸೋಲುವುದು ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ‌ ಯಡಿಯೂರಪ್ಪ ಮಾತನಾಡಿದ ಅವರು,  ತಮ್ಮ ವಿರುದ್ದ ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯ ದೂರು ನೀಡಿರುವುದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಕಾಂಗ್ರೆಸ್ ನಾಯಕರಿಗೆ ಬೇರೆ ಕೆಲಸವಿಲ್ಲದ ಕಾರಣ ಇಂತಹ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಆದ್ಯತೆ ಕೊಡುವ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಬಿಜೆಪಿ ೧೫‌ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ. ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಗೆಲುವು ನಿಶ್ಚಿತ. ಅಂತಹ ಪ್ರಾಮಾಣಿಕರನ್ನು ಜನ ಬೆಂಬಲಿಸುವುದು ನಿಶ್ಚಿತ ಎಂದು ತಿಳಿಸಿದ್ದಾರೆ.

ಸಿಎಂ ಸಂಜೆಯೊಳಗೆ ಶರತ್ ಬಚ್ಚೇಗೌಡ ನಿಗಮ ಮಂಡಳಿ ಸ್ಥಾನ ತ್ಯಜಿಸಬೇಕು. ಉಪಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಲಾಗುವುದು. ನನಗೆ ಸಂಪೂರ್ಣ ವಿಶ್ವಾಸವಿದ್ದು ಬಿಜೆಪಿಯ ಎಲ್ಲ ಅಭ್ಯರ್ಥಿಗಳು ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಎಸ್ ವೈ ಹೇಳಿದ್ದಾರೆ.