Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಹಾವೇರಿ,ಅಕ್ಟೋಬರ್,25,2024 (www.justkannada.in): ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿದೆ.

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಕಣಕ್ಕಿಳಿದಿದ್ದರೆ ಇತ್ತ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಂಡಾಯ ಅಭ್ಯರ್ಥಿಯಾಗಿ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹಾಗೆಯೇ ತನ್ನ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಮಾಜಿ ಸಂಸದ ಮಂಜುನಾಥ್ ಕುನ್ನೂರ್ ಸಹ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಗ ರಾಜು ಕುನ್ನುರ್ ರಿಗೆ ಮಂಜುನಾಥ್ ಕುನ್ನೂರ್ ಕಾಂಗ್ರೆಸ್ ಟಿಕೆಟ್ ಕೇಳಿದ್ದರು. ಆದರೆ ಯಾಸಿರ್ ಅಹ್ಮದ್ ಪಠಾನ್ ಗೆ ಟಿಕೆಟ್ ನೀಡಿದೆ ಹಿನ್ನೆಲೆಯಲ್ಲಿ ಶಿಗ್ಗಾವಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಈಗಾಗಲೇ ಅಜ್ಜಂಪಿರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದರೇ,  ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ಕುನ್ನೂರ್ ನಾಮಪತ್ರ ಸಲ್ಲಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಶಿಗ್ಗಾವಿ ಕಾಂಗ್ರೆಸ್  ನ ಬಂಡಾಯದ ಬಿಸಿ ತಟ್ಟಲಿದೆ.

Key words: Shiggamvi, By election, Congress, Rebel, nomination