Friday, August 21, 2026

BDA Apartments

Home Front Page ಶಿಗ್ಗಾಂವಿ ಕಾಂಗ್ರೆಸ್ ಬಂಡಾಯ ಶಮನ ಯಶಸ್ವಿ:  ನಾಮಪತ್ರ ವಾಪಸ್

ಶಿಗ್ಗಾಂವಿ ಕಾಂಗ್ರೆಸ್ ಬಂಡಾಯ ಶಮನ ಯಶಸ್ವಿ:  ನಾಮಪತ್ರ ವಾಪಸ್

ಹಾವೇರಿ,30,2024 (www.justkannada.in): ರಾಜ್ಯದಲ್ಲಿ ಉಪಚುನಾವಣಾ ಕಣ ರಂಗೇರಿದ್ದು ಈ ನಡುವೆ ಶಿಗ್ಗಾಂವಿ ಕ್ಷೇತ್ರದಲ್ಲಿ ಉಂಟಾಗಿದ್ದ ಭಿನ್ನಮತವನ್ನ ಶಮನ ಮಾಡುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ.

ಹೌದು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಇದೀಗ ನಾಮಪತ್ರ ವಾಪಸ್ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ ಅಹ್ಮದ್ ಖಾನ್ ಸರ್ಕಾರಿ ನಿವಾಸದಲ್ಲಿ ಇದ್ದರು. ಅಜ್ಜಂಪೀರ್ ಖಾದ್ರಿಯಿಂದ  ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿ ಡಿಕೆ ಶಿವಕುಮಾರ್ ಅವರನ್ನು ಜಮೀರ್ ಭೇಟಿ ಮಾಡಿಸಿದ್ದರು.   ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾದ ಬೆನ್ನಲ್ಲೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡಿದ್ದರು. ಇದೀಗ ಇಂದು  ಅಜ್ಜಂಪೀರ್ ಖಾದ್ರಿ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೊತೆಗೆ ಬಂದು ನಾಮಪತ್ರ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

Key words: Shiggavi, by-election, congress, rebel candidate, withdraws, nomination