ನೀಲಿ ಚಿತ್ರ ನಿರ್ಮಾಣ ಆರೋಪ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

ಬೆಂಗಳೂರು, ಜುಲೈ 20, 2021 (www.justkannada.in): ಅಶ್ಲೀಲ ಚಿತ್ರ ನಿರ್ಮಾಣ ಆರೋಪದಡಿ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರನ್ನು ಬಂಧಿಸಲಾಗಿದೆ.

ನೀಲಿ ಚಿತ್ರಗಳನ್ನು ನಿರ್ಮಿಸಿದ ಆರೋಪದಡಿ ಮುಂಬೈ ಅಪರಾಧ ದಳದ ಪೊಲೀಸರು ಉದ್ಯಮಿ ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಅಶ್ಲೀಲ ಚಿತ್ರಗಳನ್ನು ನಿರ್ಮಿಸಿ, ಮೊಬೈಲ್ ಅಪ್ಲಿಕೇಶನ್ ​ನಲ್ಲಿ ಅಪ್ಲೋಡ್​ ಮಾಡಿರುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಪ್ರಕರಣದಲ್ಲಿ ರಾಜ್​ ಕುಂದ್ರಾ ಪ್ರಮುಖ ಆರೋಪಿ ಎನ್ನಲಾಗಿದೆ.