Wednesday, September 16, 2026

BDA Apartments

Home Front Page ಕಾನೂನು ಎಲ್ಲರಿಗೂ ಒಂದೇ: ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ- ಸಚಿವ ಮಧುಬಂಗಾರಪ್ಪ.

ಕಾನೂನು ಎಲ್ಲರಿಗೂ ಒಂದೇ: ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ- ಸಚಿವ ಮಧುಬಂಗಾರಪ್ಪ.

ಶಿವಮೊಗ್ಗ,ಅಕ್ಟೋಬರ್,3,2023(www.justkannada.in): ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ. ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಘಟನೆ ನಡೆದ ರಾಗಿಗುಡ್ಡದಲ್ಲಿ ಕಲ್ಲು ತೂರಾಟದಿಂದ ಹಾನಿಯಾದ ಮನೆಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಬಳಿಕ ಮಾತನಾಡಿದ ಅವರು, ಗಲಾಟೆ ಸಂಬಂಧ ಪೊಲೀಸರು ಈವರೆಗೆ 24 FIR​ ದಾಖಲಿಸಿದ್ದಾರೆ. ಗಲಾಟೆ ಸಂದರ್ಭದಲ್ಲಿ ಗಂಭೀರ ಆಗಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಎಂದರು.ಕಾನೂನು ಎಲ್ಲರಿಗೂ ಒಂದೇ madhu Bangarappa

ಪ್ರಕರಣ ಸಂಬಂಧ ಸಂಪೂರ್ಣ ಮಾಹಿತಿ ಕಲೆ ಹಾಕುತ್ತೇವೆ. ಗಲಾಟೆಯಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ. ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ ಎಂದರು.

Key words: shimogga-EId milad-roit –case- Minister -Madhu Bangarappa.