Tuesday, September 8, 2026

BDA Apartments

Home Front Page ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ…

ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ…

ಬೆಂಗಳೂರು, ಅಕ್ಟೋಬರ್,7,2020(www.justkannada.in): ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಗಳ ಹೆಸರನ್ನ ಎಐಸಿಸಿ ಘೋಷಣೆ ಮಾಡಿದೆ.jk-logo-justkannada-logo

ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಶಿರಾದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿಬಿ ಜಯಚಂದ್ರಗೆ ಹಾಗೂ ಆರ್ ಆರ್ ನಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ  ಕುಸುಮಾ ಹೆಚ್ ಅವರಿಗೆ ಟಿಕೆಟ್ ನೀಡಿ ಎಐಸಿಸಿ ಅಧಿಕೃತವಾಗಿ ಘೋಷಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

shira-r-r-nagar-by-election-tb-jayachandra-kusuma-congress-candidate-aicc

ಆರ್ ಆರ್ ನಗರದಲ್ಲಿ ಐಎಎಸ್ ಅಧಿಕಾರಿ ದಿ. ಡಿಕೆ ರವಿ ಅವರ ಪತ್ನಿ ಕುಸುಮಾ ಹೆಚ್ ಅವರ ಹೆಸರು ಹಾಗೂ ಶಿರಾದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ ಜಯಚಂದ್ರ ಅವರ ಹೆಸರನ್ನ ಶಿಫಾರಸ್ಸು ಮಾಡಲಾಗಿತ್ತು. ಇದೀಗ ಇವರೆಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

Key words: Shira-R.R nagar-by-election-TB Jayachandra-Kusuma-congress-candidate-AICC