ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆ: ಈವರೆಗೆ ಆದ ವೋಟಿಂಗ್ ಪ್ರಮಾಣವೆಷ್ಟು..?

ತುಮಕೂರು,ನವೆಂಬರ್,3,2020(www.justkannada.in): ಬೆಂಗಳೂರಿನ ಆರ್.ಆರ್ ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರಕ್ಕೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ಇಂದು ಮೂರು ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಲಿದೆ.jk-logo-justkannada-logo

ಬೆಳಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಮಧ್ಯೆ ಈವರೆಗೆ ಎರಡು ಕ್ಷೇತ್ರಗಳಲ್ಲಿ ಆಗಿರುವ ಮತದಾನ ಪ್ರಮಾಣ ತಿಳಿದು ಬಂದಿದ್ದು, ಶಿರಾ ಕ್ಷೇತ್ರದಲ್ಲಿ ಬೆಳಗ್ಗೆ 11 ಗಂಟೆವರೆಗೆ ಶೇ 23.63ರಷ್ಟು ಮತದಾನ ನಡೆದಿದೆ.  ಹಾಗೆಯೇ ಆರ್. ಆರ್. ನಗರ ಕ್ಷೇತ್ರದಲ್ಲಿ ಕೇವಲ 14.44ರಷ್ಟು ಮತದಾನವಾಗಿದೆ.shira-rr-nagara-by-election-voting-rate

ಆರ್.ಆರ್ ನಗರ ಕ್ಷೇತ್ರಕ್ಕಿಂತ ಶಿರಾ ಕ್ಷೇತ್ರದಲ್ಲಿ ಹೆಚ್ಚು ಮತದಾನವಾಗಿದೆ. ಶಿರಾ ಕ್ಷೇತ್ರದಲ್ಲಿ ಉಪ ಚುನಾವಣೆಯ ಮತದಾನ ಬಿರುಸಿನಿಂದ ನಡೆಯುತ್ತಿದೆ.

Key words:  Shira- RR nagara- by-election-voting-rate