ಶಿರಾ ಕ್ಷೇತ್ರ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ಕಣಕ್ಕೆ

ಬೆಂಗಳೂರು,ಸೆಪ್ಟೆಂಬರ್, 16, 2020(www.justkannada.in) : ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ಅವರ ಹೆಸರು ಸೂಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

jk-logo-justkannada-logo

ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಶಿರಾ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದೆ.

Shira-constituency-by-election-Congress-TB Jayachandra-candidate

 

ಉಪಚುನಾವಣೆ ಸಂಬಂಧ ಇಂದು ಸಭೆ ನಡೆಸಿ ಚರ್ಚಿಸಿದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್,  ಅಭ್ಯರ್ಥಿಯ ಆಯ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರೊಂದಿಗೆ ಮಾತನಾಡಿದ್ದು, ಅವರು ಕೂಡ ಟಿ.ಬಿ.ಜಯಚಂದ್ರ ಅವರ ಹೆಸರನ್ನು ಸೂಚಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ ಜಯಚಂದ್ರ ಕಣಕ್ಕಿಳಿಯಲಿದ್ದಾರೆ.  ಇಂದಿನಿಂದಲೇ ಉಪಚುನಾವಣೆ ಕೆಲಸ ಆರಂಭಿಸಲಿದ್ದು, ನಮ್ಮ ಅಭಿಪ್ರಾಯವನ್ನು ಹೈಕಮಾಂಡ್ ಗೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.

key words : Shira-constituency-by-election-Congress-TB Jayachandra-candidate