Sunday, September 20, 2026

BDA Apartments

Home Crime ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಶಿರಸ್ತೇದಾರ್.

ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಶಿರಸ್ತೇದಾರ್.

ಬೆಂಗಳೂರು,ಸೆಪ್ಟಂಬರ್,15,2022(www.justkannada.in): ಲಂಚ ಸ್ವೀಕರಿಸುವ ವೇಳೆ  ರೆಡ್ ಹ್ಯಾಂಡ್ ಆಗಿ ಕಂದಾಯ ಇಲಾಖೆ ಶಿರಸ್ತೇದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಕಂದಾಯ ಇಲಾಖೆ ಶಿರಸ್ತೇದಾರ್ ಶ್ರೀಕಾಂತ್ ಬಲೆಗೆ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದವರು. ದೂರುದಾರ ರಘೂ ಶಂಕರ್ ಎಂಬುವವರಿಂದ  45 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ರಘು ಶಂಕರ್  ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ್ಧರು. ಶಿರಸ್ತೇದಾರ್ ಶ್ರೀಕಾಂತ್ ದೂರುದಾರ ರಘು ಶಂಕರ್  ಅವರ ಬಳಿ 13 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ರಘು ಶಂಕರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಲೋಕಾಯುಕ್ತ ಎಸ್ ಪಿ ಅಶೋಕ್ ನೇತೃತ್ವದಲ್ಲಿ ದಾಳಿ ನಡೆಸಿ ಶಿರಸ್ತೇದಾರ್ ಶ್ರೀಕಾಂತ್ ಅವರನ್ನ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

Key words: Shirastedar- revenue department-trap – Lokayukta