ರಾತ್ರೋ ರಾತ್ರಿ ಶಿವರಾತ್ರಿ ರಾಜೇಂದ್ರ ಶ್ರೀಗಳ ಪುತ್ಥಳಿ ಪ್ರತಿಷ್ಠಾಪನೆ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ವಿರೋಧ.

ಮೈಸೂರು,ಡಿಸೆಂಬರ್,9,2023(www.justkannadain):  ನಗರದ ಅರಮನೆ ಗನ್‌ಹೌಸ್ ವೃತ್ತದಲ್ಲಿ ಲಿಂಗೈಕ್ಯ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆಯನ್ನ ರಾತ್ರೋರಾತ್ರಿ ಪ್ರತಿಷ್ಠಾಪನೆ ಮಾಡಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದು ಪುತ್ಥಳಿ ಪ್ರತಿಷ್ಠಾಪನೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ವಿರೋಧ  ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ಈ ಪ್ರತಿಮೆಯನ್ನ ರಾತ್ರಿ ವೇಳೆ ಪ್ರತಿಷ್ಟಾಪನೆ ಮಾಡಿರುವುದು ದುರದೃಷ್ಟಕರ ಸಂಗತಿ. ಪ್ರಬುದ್ಧ ಸಂಸ್ಥೆಯಿಂದ ಇಂತಹ ಘಟನೆ ಸಮಂಜಸವಲ್ಲ. ಉದ್ದೇಶಿತ ಪ್ರತಿಮೆಗೆ ಸತತವಾಗಿ ವಿರೋಧ ತೋರಿದ ಸಾರ್ವಜನಿಕರಿಗೆ ಸ್ಪಂದಿಸಿ ಈ ಬಗ್ಗೆ ಪುನರ್ ವಿಮರ್ಶೆ ಮಾಡಲು ಮನವಿ ಕೂಡ ತಲುಪಿಸಿ  ನನ್ನ ಬೆಂಬಲ ಸೂಚಿಸಿದ್ದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರಮನೆ ಗನ್‌ಹೌಸ್ ವೃತ್ತದಲ್ಲಿ ಲಿಂಗೈಕ್ಯ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆಯನ್ನ ಏಕಾಏಕಿ ಕ್ರೇನ್ ಮೂಲಕ ನಿನ್ನೆ ರಾತ್ರಿ ಪ್ರತಿಷ್ಟಾಪನೆ ಮಾಡಲಾಗಿತ್ತು.

Key words:  Shivratri Rajendra Sri –statue- installation-Pramodadevi Wodeyar -oppose