Saturday, August 8, 2026

BDA Apartments

Home Front Page ಕೇಂದ್ರ ಸಚಿವ ಸ್ಥಾನ ಸಿಗದ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು ಹೀಗೆ…?

ಕೇಂದ್ರ ಸಚಿವ ಸ್ಥಾನ ಸಿಗದ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದು ಹೀಗೆ…?

ಬೆಂಗಳೂರು,ಮೇ,30,2019(www.justkannada.in):  ಕೇಂದ್ರ ಸಚಿವ ಸಂಪುಟ ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ಬೇಸರವಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾಕರಂದ್ಲಾಜೆ ತಿಳಿಸಿದ್ದಾರೆ.

ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದೆ ಶೋಭಾ ಕರಂದ್ಲಾಜೆ, ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಿಲ್ಲ. ನನಗೆ ಕೊಟ್ಟಿರುವ  ಕೆಲಸವನ್ನೇ ಶ್ರದ್ಧೆಯಿಂದ ನಿರ್ವಹಿಸುತ್ತೇನೆ.ಸಚಿವ ಸ್ಥಾನವನ್ನ ನಾನು ನಿರೀಕ್ಷಿಸಿಲ್ಲ. ಸಿಗದಿದ್ದಕ್ಕೆ ನಿರಾಸೆಯೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು 2ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಡುವೆ ರಾಜ್ಯದಲ್ಲಿ ಡಿ.ವಿ ಸದಾನಂದಗೌಡ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಕ್ಕಿದ್ದು ಇವರೂ ಸಹ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಡುವೆ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಕೆಲವು ಸಂಸದರಿಗೆ ಮಂತ್ರಿ ಸ್ಥಾನ ನೀಡುವಂತೆ ಬಿಎಸ್ ಯಡಿಯೂರಪ್ಪ ಹೈಕಮಾಂಡ್ ಗೆ ಮನವಿ ಮಾಡಿದ್ದರು ಎನ್ನಲಾಗಿದೆ.

Key words: Shobha Karandlaje responded about  not getting a Union minister position

#Shobha Karandlaje  #unionminister #newdehli