ಜೆಡಿಎಸ್’ಗೆ ಶಾಕ್: ಪಕ್ಷ ತ್ಯಜಿಸಿದ ಮಾಜಿ ಶಾಸಕ ಹೆಚ್.ನಿಂಗಪ್ಪ

ಬೆಂಗಳೂರು. ನವೆಂಬರ್ 15, 2022 (www.justkannada.in): ಜೆಡಿಎಸ್ ಮಾಜಿ ಶಾಸಕ ಹೆಚ್. ನಿಂಗಪ್ಪ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

2006 ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದ ಹೆಚ್. ನಿಂಗಪ್ಪ, 2013 ರಲ್ಲಿ ಜೆಡಿಎಸ್ ಬಿಟ್ಟು ಕೆಜೆಪಿಯಿಂದ ಸ್ಪರ್ಧಿಸಿದ್ದರು. ಬಳಿಕ 2018 ರಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದರು. ಇದೀಗ ಮತ್ತೆ ಜೆಡಿಎಸ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಜೆಡಿಎಸ್ ನಾಯಕರಿಗೆ ಮತ್ತೊಂದು ಶಾಕ್ ಸಿಕ್ಕಿದೆ.

ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಇಟ್ಟಿದ್ದಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ಅಸಮಾಧಾನಗೊಂಡಿದ್ದರು. ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂಗೆ ಹೆಚ್.ನಿಮಗಪ್ಪ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.