ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್. 

ಬೆಂಗಳೂರು,ಏಪ್ರಿಲ್,4,2022(www.justkannada.in): ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಮುಂತಾದ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ನಡುವೆ ಇದೀಗ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿಯೂ ತಟ್ಟಿದೆ.

ಹೌದು ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ. ರಾಜ್ಯಾದ್ಯಂತ ಪ್ರತಿ ಯುನಿಟ್ ಗೆ  ಸರಾಸರಿ 35 ಪೈಸೆ ಹೆಚ್ಚಳ ಮಾಡಲಾಗಿದೆ.  ಬೆಸ್ಕಾಂ, ಜೆಸ್ಕಾಂ, ಮೆಸ್ಕಾಂ, ಚೆಸ್ಕಾಂ ವ್ಯಾಪ್ತಿಯಲ್ಲಿ  ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Shock –people- power –hike