ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿದ್ದವರಿಗೆ ಶಾಕ್: ಆರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಅಮಾನತು…

ಮೈಸೂರು,ಮಾರ್ಚ್,6,2021(www.justkannada.in): ಮೈಸೂರು ಮೇಯರ್ ಚುನಾವಣೆಯಲ್ಲಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧವೇ ಶಾಸಕ ತನ್ವೀರ್ ಸೇಠ್ ಬೆಂಬಲಿಗರು ಘೋಷಣೆ ಕೂಗಿದ್ದರು.jk

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿದ್ದವರಿಗೆ ಮೈಸೂರು ನಗರ ಕಾಂಗ್ರೆಸ್‌ ಶಾಕ್ ನೀಡಿದೆ. ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿದ್ದವರನ್ನ ಕಾಂಗ್ರೆಸ್ ಸದಸ್ಯತ್ವ ಸ್ಥಾನದಿಂದ ಅಮಾನತು ಮಾಡಲಾಗಿದೆ. ಹೌದು  ಎನ್.ಆರ್.ಕ್ಷೇತ್ರದಲ್ಲಿ 6 ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನ  ಸಸ್ಪೆಂಡ್ ಮಾಡಿ  ಮೈಸೂರು ನಗರ ಅಧ್ಯಕ್ಷ ಆರ್.ಮೂರ್ತಿ ಆದೇಶ ಹೊರಡಿಸಿದ್ದಾರೆ.

ಶಾಹಿದ್, ಎಂ.ಎನ್.ಲೋಕೆಶ್, ಅಬೀಬ್, ಅಣ್ಣು, ಅಣ್ಣು ಪುತ್ರರನ್ನ ಸೇರಿ ಮತ್ತೊಬ್ಬರು ಅಮಾನತು ಗೊಂಡವರಾಗಿದ್ದಾರೆ. ಅಮಾನತಾದವರು. ತನ್ವೀರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕಾರ್ಯಕರ್ತರು ಎನ್ನಲಾಗಿದೆ.  ಮೈಸೂರು ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ  ಮೇಯರ್ ಸ್ಥಾನವನ್ನ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದಕ್ಕೆ ಸ್ಥಳೀಯ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ವಿರುದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಅಸಮಾಧಾನಗೊಂಡಿದ್ದರು. ಜತೆಗೆ ಶಾಸಕ ತನ್ವೀರ್ ಸೇಠ್ ಗೆ ನೋಟಿಸ್ ನೀಡಲು ಕಾಂಗ್ರೆಸ್ ಮುಂದಾಗಿತ್ತು.shocked-shouted-slogans-against-siddaramaiah-six-congress-workers-suspended-mysore

ಈ ಹಿನ್ನೆಲೆಯಲ್ಲಿ ಫೆ.26ರಂದು ಎನ್.ಆರ್.ಕ್ಷೇತ್ರದಲ್ಲಿರುವ ತನ್ವೀರ್‌ ಸೇಠ್ ಅವರ ಮನೆ ಮುಂದೆಯೇ ತನ್ವೀರ್ ಸೇಠ್ ಬೆಂಬಲಿಗರು ಸಿದ್ದರಾಮಯ್ಯ ವಿರುದ್ದ  ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಎನ್.ಆರ್.ಕ್ಷೇತ್ರದ 6 ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನ ಮುಂದಿನ ಆದೇಶದವರೆಗೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಅಮಾನತ್ತಿನ ಮೂಲಕ ಕಾಂಗ್ರೆಸ್ ಕಲಹ ಮತ್ತಷ್ಟು ರಂಗೇರಿದೆ.

Key words: Shocked -shouted -slogans –against- Siddaramaiah-Six Congress –workers- suspended-mysore