Thursday, August 13, 2026

BDA Apartments

Home Front Page ಏಕದಿನ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ ಶೋಯಿಬ್ ಮಲಿಕ್

ಏಕದಿನ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ ಶೋಯಿಬ್ ಮಲಿಕ್

ಲಂಡನ್, ಜುಲೈ 06, 2019 (www.justkannada.in): ಪಾಕಿಸ್ತಾನ ಕ್ರಿಕೆಟ್ ತಂಡ ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿದ ಬೆನ್ನಲ್ಲೇ ಖ್ಯಾತ ಆಲ್‌ರೌಂಡರ್ ಶೋಯಿಬ್ ಮಲಿಕ್ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.

ಅಂತಿಮ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧ 94 ರನ್‌ಗಳ ಜಯ ಸಾಧಿಸಿದರೂ, ಸೆಮಿಫೈನಲ್ ಹಂತಕ್ಕೇರಲು ವಿಫಲವಾಗಿತ್ತು.

ಪಂದ್ಯ ಮುಗಿದ ತಕ್ಷಣ ಮಲಿಕ್ ತಮ್ಮ ನಿವೃತ್ತಿ ನಿರ್ಧಾರದ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವು ಮಂದಿ ಸಹ ಆಟಗಾರರು ಮತ್ತು ಅಭಿಮಾನಿಗಳು ಅವರ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.