ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಔಷಧಿ ಕೊರತೆ ಇದೆ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್…

ಬೆಂಗಳೂರು,ಮೇ,20,2021(www.justkannada.in):  ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಔಷಧ ಕೊರತೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.jk

ಔಷಧಿ ಕೊರತೆ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಔಷಧಿ ಕೊರತೆ ಇದೆ. ಹೀಗಾಗಿ  ಎಷ್ಟು ಲಭ್ಯವಿದೆಯೋ ಅಷ್ಟು ಮಾತ್ರ ಚಿಕಿತ್ಸೆ ನೀಡುತ್ತಿದ್ದೇವೆ.  ಕೇವಲ 6 ವಿಭಾಗಗಳಿಗೆ ಆಗುವಷ್ಟು ಮಾತ್ರ ಔಷಧಿ ಇದೆ.  ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.shortage-drugs-treat-black-fungus-state-minister-dr-k-sudhakar

ಔಷಧಿಕಾರಿಗ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೆ ಔಷಧಿ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ವಿಜಯಪುರದಲ್ಲಿ 30 ಜನರಿಗೆ ಬ್ಲ್ಯಾಕ್ ಫಂಗಸ್ ಇದೆ. ಔಷಧಿ ಕೊರತೆ ಹಿನ್ನೆಲೆ ಒಬ್ಬರಿಗೆ 50 ಡೋಸ್ ನೀಡದಂತೆ ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ಸೂಚನೆ ನೀಡಿದ್ದೇವೆ ಎಂದು ಸಚಿವ ಸುಧಾಕರ್ ತಿಳಿಸಿದರು.

ಲಾಕ್ ಡೌನ್ ಮುಂದುವರಿಕೆ ವಿಚಾರ, ಈ ಬಗ್ಗೆ ಮೇ 23 ರಂದು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸುಧಾಕರ್ ತಿಳಿಸಿದರು.

Key words: shortage -drugs – treat -black fungus – state-Minister – Dr. K. Sudhakar.