Friday, September 25, 2026

BDA Apartments

Home Front Page ಗುಂಡಿಕ್ಕಿ ಕೊಲ್ಲಿ ಹೇಳಿಕೆ: ಕೆ.ಎಸ್ ಈಶ್ವರಪ್ಪಗೆ ಡಿ.ಕೆ ಸುರೇಶ್ ಸವಾಲು.

ಗುಂಡಿಕ್ಕಿ ಕೊಲ್ಲಿ ಹೇಳಿಕೆ: ಕೆ.ಎಸ್ ಈಶ್ವರಪ್ಪಗೆ ಡಿ.ಕೆ ಸುರೇಶ್ ಸವಾಲು.

ಬೆಂಗಳೂರು,ಫೆಬ್ರವರಿ 10,2024(www.justkannada.in): ದೇಶದ್ರೋಹಿ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೊಳಿಸಬೇಕು  ಎಂದು ಹೇಳಿಕೆ ನೀಡಿದ್ದ  ಮಾಜಿ ಸಚಿವ ಕೆ ಎಸ್ ಈಶ್ವರಪ್ಪರಿಗೆ ಸಂಸದ ಡಿ.ಕೆ ಸುರೇಶ್ ಸವಾಲು ಹಾಕಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಡಿ.ಕೆ ಸುರೇಶ್, ಬೇರೆಯವರು ಏಕೆ ಗುಂಡಿಕ್ಕಿ ಕೊಲ್ಲಬೇಕು, ನೀವು ಸಮಯ ಕೊಟ್ಟರೆ ನಿಮ್ಮ ಎದುರು ಬಂದು ನಿಲ್ಲುತ್ತೇನೆ, ನೀವೇ ಗುಂಡಿಕ್ಕಿ ಕೊಂದುಬಿಡಿ ಈಶ್ವರಪ್ಪನವರೇ ಎಂದು ಹೇಳಿದ್ದಾರೆ.

ಕನ್ನಡಿಗರಿಗಾಗಿ, ಕರ್ನಾಟಕ್ಕೋಸ್ಕರ ಇನ್ನೊಂದು ವಾರದೊಳಗೆ ಸಮಯ ಕೊಡುತ್ತೇನೆ, ನಿಮ್ಮ ಮುಂದೆ ಬಂದು ನಿಲ್ಲುತ್ತೇನೆ, ದಯವಿಟ್ಟು ನಿಮ್ಮ ಆಸೆ ಈಡೇರಿಸಿಕೊಂಡು ನಿಮ್ಮ ನಾಯಕರಿಂದ ಶಹಬ್ಬಾಸ್ ಗಿರಿ ತೆಗೆದುಕೊಳ್ಳಿ ಎಂದು ಡಿ.ಕೆ ಸುರೇಶ್ ಲೇವಡಿ ಮಾಡಿದ್ದಾರೆ.ಗುಂಡಿಕ್ಕಿ ಕೊಲ್ಲಿ ಹೇಳಿಕೆ: ಕೆ.ಎಸ್ ಈಶ್ವರಪ್ಪಗೆ ಡಿ.ಕೆ ಸುರೇಶ್ ಸವಾಲು dk suresh

ಮಹಾತ್ಮಾ ಗಾಂಧಿಯವರನ್ನು ಕೊಂದ ಕೀರ್ತಿ ಬಿಜೆಪಿ ಪಕ್ಷಕ್ಕಿದೆ. ಕನ್ನಡಪರ, ಕರ್ನಾಟಕ ಪರ ಧ್ವನಿಯೆತ್ತಿದ್ದಕ್ಕೆ ನನ್ನನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳುತ್ತಿದ್ದಾರೆ. ಬಡವರನ್ನು ಬಾವಿಗೆ ತಳ್ಳಿ ಯಾಕೆ ಆಟ ನೋಡುತ್ತೀರಿ, ನಿಮಗೆ ರಾಜ್ಯಪಾಲ ಹುದ್ದೆಯ ಆಸೆ ಇರಬೇಕೆಂದು ಕಾಣಿಸುತ್ತದೆ. ಬಿಜೆಪಿಯವರು ನಿಮ್ಮನ್ನು ಮೂಲೆಗುಂಪು ಮಾಡುತ್ತಿದ್ದಾರೆ ಅಂತ ಕಾಣಿಸುತ್ತದೆ. ಇದರಿಂದಾಗಿ ನೊಂದು ಹಿರಿಯರಾಗಿದ್ದರೂ ಕೂಡ ಏನೋ ಮಾತನಾಡಬೇಕೆಂದು ಆಗಾಗ ಈ ರೀತಿ ಮಾತನಾಡುತ್ತಿದ್ದೀರಿ ಎಂದು ಟಾಂಗ್ ನೀಡಿದರು.

Key words: Shot and killed –statement-KS Eshwarappa – DK Suresh.