ಶುಶ್ರುತ್ ಗೌಡ ಬಿಜೆಪಿ ಸೇರ್ಪಡೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ-ಹೆಚ್.ಎ ವೆಂಕಟೇಶ್

ಮೈಸೂರು,ಏಪ್ರಿಲ್,24,2024 (www.justkannada.in): ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿಸಿದ್ದ ಡಾ. ಸುಶ್ರುತ್ ಗೌಡ ಬಿಜೆಪಿ ಸೇರ್ಪಡೆಯಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ . ಪಕ್ಷದ ಸಂಘಟನೆಯಲ್ಲಿ ಗುರುತಿಸಿಕೊಂಡಿರಲಿಲ್ಲ. ಆದ ಕಾರಣ ಶುಶ್ರುತ್ ಗೌಡ ಬಿಜೆಪಿ ಸೇರ್ಪಡೆಯಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕಾ೦ಗ್ರೆಸ್ ಪಕ್ಷದ ಅಭ್ಯರ್ಥಿ ಎಂ.ಲಕ್ಷ್ಮಣ್ ಗೆಲುವು ನಿಶ್ಚಿತ ಎಂದು ಕೆಪಿಸಿಸಿ ವಕ್ತಾರ ಎಚ್. ಎ ವೆಂಕಟೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಎಚ್.ಎ ವೆಂಕಟೇಶ್, ಕಾ೦ಗ್ರೆಸ್ ಪಕ್ಷ ಸ್ವಾತಂತ್ರ್ಯ ಬಂದಾಗಿನಿಂದಲೂ ದೀನದಲಿತರು ದುರ್ಬಲರ ಪರವಾಗಿ ಸೇವೆ ಸಲ್ಲಿಸುತ್ತಾ ಬಂದಿದೆ. ಬಡವರಿಗೆ ಉಚಿತ ಮನೆ , ನಿರುದ್ಯೋಗಿಗಳಿಗೆ ಉದ್ಯೋಗ, ಬ್ಯಾಂಕ್ ಗಳ ರಾಷ್ಟ್ರೀಕರಣ ಮಾಡಿ ಬಡಬಗ್ಗರಿಗೆ ಸಾಲ ಯೋಜನೆಗಳನ್ನು ಜಾರಿಗೊಳಿಸಿದೆ. ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅದ್ಬುತ ಸಾಧನೆ ಮಾಡಿ ದೇಶದ ಪ್ರಗತಿಗೆ ತನ್ನದೇ ಆದ ಕೊಡುಗೆ ನೀಡಿದೆ ಎಂದು ಹೆಚ್.ಎ ವೆಂಕಟೇಶ್ ತಿಳಿಸಿದ್ದಾರೆ.

ಉದ್ಯೋಗ , ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಿದ ಏಕೈಕ ಪಕ್ಷ ಎಂಬ ಹೆಗ್ಗಳಿಕೆಗೆ ಕಾಂಗ್ರೆಸ್  ಪಕ್ಷ ಪಾತ್ರವಾಗಿದೆ  ಎಂದು ಹೆಚ್.ಎ ವೆಂಕಟೇಶ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಧಾನಸಭೆ ಚುನಾವಣೆ ಸಮಯದಲ್ಲಿ ನೀಡಿದ್ದ 5 ಗ್ಯಾರಂಟಿಗಳನ್ನು ಜಾರಿ ಮಾಡಿ ಜನರ ವಿಶ್ವಾಸ ಉಳಿಸಿಕೊಂಡಿದೆ. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿಯೋಜನೆ, ಯುವನಿಧಿ ಯೋಜನೆಗಳು ಸರ್ಕಾರದ ಜನಪ್ರಿಯತೆ ಹೆಚ್ಚಿಸಿವೆ. ಬಡವರು ಈ ಯೋಜನೆಗಳ ಲಾಭ ಪಡೆದು ಈಗ ಸರ್ಕಾರದ ಪರವಾಗಿ ಒಲವು ತೋರಿಸುತ್ತಿದ್ದಾರೆ ಎಂದಿದ್ದಾರೆ.

ರೈತರ ಸಾಲ ಮನ್ನಾ, ಪ್ರತಿ ಬಡ ಮಹಿಳೆಗೆ ಒಂದು ಲಕ್ಷ ರೂ. ಸಹಾಯ ಧನ, ವಿದ್ಯಾರ್ಥಿಗಳ ಸಾಲಮನ್ನಾ, ಖಾಲಿ ಇರುವ 32 ಲಕ್ಷ ಉದ್ಯೋಗಗಳ ಭರ್ತಿ, ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಕಾಂಗ್ರೆಸ್ ಪ್ರಣಾಳಿಕೆ  ಬಗ್ಗೆ ಹೆಚ್ಚಿನ ವಿಶ್ವಾಸ ಮೂಡಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದು , ರಾಜ್ಯದ ಅನೇಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತಾ ಬಂದಿದ್ದಾರೆ. ಇವರ ಈ ಸೇವೆಯನ್ನು ಗುರುತಿಸಿ ಪಕ್ಷ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಶಿವಕುಮಾರ್ ನೀಡಿರುವ ಜನಪರ ಯೋಜನೆಗಳು ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಗೆಲುವು ತಂದು ಕೊಡಲಿದೆ ಎಂದು  ಹೆಚ್.ಎ ವೆಂಕಟೇಶ್ ತಿಳಿಸಿದ್ದಾರೆ.

Key words: ShushruthGowda, BJP, no effect, HA Venkatesh