ಸಿದ್ಧಗಂಗಾ ಮಠಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಶ್ರೀಗಳ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಕೆ.

ತುಮಕೂರು,ಏಪ್ರಿಲ್,1,2022(www.justkannada.in): ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯೋತ್ಸವ ಹಿನ್ನೆಲೆ ಸಿದ‍್ಧಗಂಗಾ ಮಠದಲ್ಲಿ ಸಂಭ್ರಮ ಸಡಗರ ಕಳೆಗಟ್ಟಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ಧುಗೆ ದರ್ಶನ ಪಡೆದರು.

ಬೆಂಗಳೂರಿನಿಂದ ತುಮಕೂರಿಗೆ ಆಗಮಿಸಿದ ಅಮಿತ್ ಶಾಗೆ ಸಿದ್ಧಗಂಗಾ ಮಠದಲ್ಲಿ ಅದ‍್ಧೂರಿ ಸ್ವಾಗತ ಕೋರಲಾಯಿತು. ನಂತರ ಡಾ.ಶಿವಕುಮಾರ ಸ್ವಾಮೀಜಿ ಅವರ ಗದ್ಧುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಬಳಿಕ ಮಠದಲ್ಲಿ ನಡೆಯುತ್ತಿರುವ ಗುರುವಂದನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು,  ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಭಗವಂತ ಖೂಬಾ,  ಸಚಿವರು ಸಂಸದರು ಸೇರಿ ಹಲವು ಗಣ್ಯರು ಭಾಗಿಯಾಗಿದ್ದಾರೆ.

Key words: siddaganga shri-central minister-amith sha