ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ವಿಫಲ- ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ವಾಗ್ದಾಳಿ…

ಕೋಲಾರ,ಮೇ,22,2019(www.justkannada.in): ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಇದೀಗ ಮತ್ತೆ  ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ.

ಕೋಲಾರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್, ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷರಾಗಿ ವಿಫಲರಾಗಿದ್ದಾರೆಂದು ಮತ್ತೊಮ್ಮೆ ಗುಡುಗಿದ್ದಾರೆ.

ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸರಿಯಾದ ಕಾರ್ಯಸೂಚಿಗಳನ್ನ ದಾಖಲಿಸುವಲ್ಲಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ನಾನು ಈಗಾಗಲೇ ಸಚಿವನಾಗಿ ಕೆಲಸ ಮಾಡಿದ್ದೇನೆ. ನನಗೆ ಅವಕಾಶ ಕೊಟ್ಟರೆ ನಿಭಾಯಿಸುತ್ತೇನೆ. ಕಾಂಗ್ರೆಸ್ ನವರ ಕಿರುಕುಳ ತಡೆದುಕೊಳ್ಳುವ ಶಕ್ತಿ ಸಿಎಂಗೆ ಇದೆ. ಮೇ.23ರ ಬಳಿಕ ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗಲ್ಲ. ರಾಜ್ಯ ಸಮ್ಮಿಶ್ರ ಸರ್ಕಾರ ಚಿರಾಯುವಾಗಿರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೋಷನ್ ಬೇಗ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್. ರೋಷನ್ ಬೇಗ್ ಬೇರೆ ಪಕ್ಷಕ್ಕೆ ಹೋಗಲು ಸ್ವತಂತ್ರರು.  ಪದೇ ಪದೇ ಚುನಾವಣೆ ನಡೆಸೋದು ಜನರಿಗೆ ಹೊರೆಯಾಗುತ್ತದೆ ಎಂದು ಹೆಚ್.ವಿಶ್ವನಾಥ್ ನುಡಿದರು.

Key words: Siddaramaiah as President of the Coordination Committee failed.-H. Vishwanath

#politicalnews #hvishwanath #siddaramauah #kolar