Tuesday, September 22, 2026

BDA Apartments

Home Front Page ಸಿದ್ಧರಾಮಯ್ಯ ಮತ್ತೆ ಸಿಎಂ ಆಗಬೇಕು- ಮತ್ತಿಬ್ಬರು ಕಾಂಗ್ರೆಸ್ ಶಾಸಕರಿಂದ ಹೇಳಿಕೆ.

ಸಿದ್ಧರಾಮಯ್ಯ ಮತ್ತೆ ಸಿಎಂ ಆಗಬೇಕು- ಮತ್ತಿಬ್ಬರು ಕಾಂಗ್ರೆಸ್ ಶಾಸಕರಿಂದ ಹೇಳಿಕೆ.

ಬಳ್ಳಾರಿ,ಜೂನ್,22,2021(www.justkannada.in):  ಸಿದ್ಧರಾಮಯ್ಯ ಭಾವಿ ಸಿಎಂ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದರು. ನಂತರ ಶಾಸಕ ರಾಘವೇಂದ್ರ ಹಿಟ್ನಾಳ್ ಸಹ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿಕೆ ನೀಡಿದ್ದು ಕಾಂಗ್ರೆಸ್ ವಲಯದಲ್ಲಿ ಸಾಕಷ್ಟು ಗೊಂದಲ ಸೃಷ್ಠಿಸಿತ್ತು. ಇದೀಗ ಮತ್ತಿಬ್ಬರು ಕಾಂಗ್ರೆಸ್ ಶಾಸಕರು ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದು ಹೇಳಿಕೆ ನೀಡಿದ್ದಾರೆ.jk

ಹೌದು, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಮತ್ತು ಕಂಪ್ಲಿ ಶಾಸಕ ಗಣೇಶ್  ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಾಸಕ  ಭೀಮಾನಾಯ್ಕ್. ಸಿದ್ಧರಾಮಯ್ಯ ಮತ್ತೆ ಸಿಎಂ ಆಗಬೇಕೆಂಬುದು ಜನರ ಕೂಗು. ನನ್ನ ವೈಯಕ್ತಿಕ ಅಭಿಪ್ರಾಯವೂ ಹೌದು. ರಾಜ್ಯದ ಅಭಿವೃದ್ಧಿ ದೃಷ್ಠಿಯಿಂದ  ಸಿದ್ಧರಾಮಯ್ಯ ಮತ್ತೆ ಸಿಎಂ ಆಗಬೇಕು. ಮುಂದೆ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಆಗ ಸಿದ್ಧರಾಮಯ್ಯ ಸಿಎಂ ಆಗಲಿ ಎಂದಿದ್ದಾರೆ.

ಶಾಸಕ ಕಂಪ್ಲಿ ಗಣೇಶ್ ಮಾತನಾಡಿ, ಸಿದ್ಧರಾಮಯ್ಯ ಮತ್ತೆ ಸಿಎಂ ಆದರೆ ಒಳಿತು. ಇದು ಜನರ ಧ್ವನಿಯಾಗಿದೆ. ಮುಂದಿನ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಹೋಗಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು ತಿಳಿಸಿದ್ದಾರೆ.

Key words: Siddaramaiah – become –CM- again-Congress -MLAs.