ಸಿದ್ದರಾಮಯ್ಯ ಬಿಜೆಪಿಗೆ ಬಂದ್ರೆ ನನ್ನ ಕ್ಷೇತ್ರ ಬಿಟ್ಟುಕೊಡುವೆ ಎಂದ ಬಿಜೆಪಿ ಶಾಸಕ…

ಚಿತ್ರದುರ್ಗ,ಮಾ,9,2020(www.justkannada.in):  ಸಿದ್ಧರಾಮಯ್ಯ ಬಿಜೆಪಿಗೆ ಬಂದರೇ ನನ್ನ ಕ್ಷೇತ್ರ ಬಿಟ್ಟುಕೊಡುವೆ ಎಂದು ಬಿಜೆಪಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ, ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯನವರನ್ನು ಹೊರಗಿಡುವ ಯತ್ನ ನಡೆಯುತ್ತಿದೆ. ಒಂದು ವೇಳೆ ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ಅವರನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ಸಿದ್ದರಾಮಯ್ಯ ಬಿಜೆಪಿಗೆ ಬಂದರೇ ನನ್ನ ಕ್ಷೇತ್ರದಿಂದಲೇ ಸ್ಪರ್ಧಿಸಲಿ ಕ್ಷೇತ್ರ ಬಿಟ್ಟುಕೊಡುತ್ತೇನೆ.  ರಾಜಕೀಯದಲ್ಲಿ ಯಾರೂ ಶತ್ರುಗಳು ಅಲ್ಲ. ಯಾರೂ ಮಿತ್ರರೂ ಅಲ್ಲ ಎಂದು ತಿಳಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದಷ್ಟೆ  ಮಾತನಾಡಿದ್ದ ಬಾಬುರಾವ್ ಚಿಂಚನಸೂರ್. ಕಾಂಗ್ರೆಸ್ ನಲ್ಲಿ ಸಿದ್ಧರಾಮಯ್ಯರನ್ನ ಕಂಡರೇ ಕೆಲವರಿಗೆ ಆಗಲ್ಲ ಹೀಗಾಗಿ ಸಿದ್ಧರಾಮಯ್ಯ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬೇರೆ ಮಾರ್ಗ ಹುಡುಕುತ್ತಿದ್ದಾರೆ. ಅದ್ದರಿಂದ ಅವರು ಮುಂದಿನ ದಿನಗಳಲ್ಲಿ ಬಿಜೆಪಿ ಸೇರಬಹುದು ಬಿಜೆಪಿ ಸೇರಿದರೇ ಸಿದ್ಧರಾಮಯ್ಯರನ್ನ ಕೇಂದ್ರದ ಮಂತ್ರಿ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದರು.

Key words: Siddaramaiah -BJP MLA- – give up -my constituency.