ಜೆಡಿಎಸ್ ಮುಗಿಸಲು ಸಿದ್ದರಾಮಯ್ಯ ಅವರಿಂದ ಸಾಧ್ಯವಿಲ್ಲ -ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಗುಡುಗು

ಬೆಂಗಳೂರು,ಸೆಪ್ಟಂಬರ್,27,2021(www.justkannada.in):  ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ಮಾಜಿ ಪ್ರಧಾನಮಂತ್ರಿಹೆಚ್.ಡಿ.ದೇವೇಗೌಡರು ಹೇಳಿದರು.

2023ಕ್ಕೆ ಜಾತ್ಯತೀತ ಜನತಾದಳದ  ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿಯೊಂದಿಗೆ ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾದ 4 ದಿನಗಳ ‘ಜನತಾ ಪರ್ವ 1.O’ ಕಾರ್ಯಗಾರವನ್ನು ಉದ್ಘಾಟನೆ ಮಾಡಿ ಹೆಚ್.ಡಿ ದೇವೇಗೌಡರು ಮಾತನಾಡಿದರು.

ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ. ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ? ಎಂಬುದನ್ನು ಅರಿತು ಮಾತನಾಡಬೇಕು. ಅವರ ಜತೆ ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರು ಯಾರು ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ-ದೇಶಕ್ಕೆ ಗೊತ್ತಿದೆ ಎಂದು ಹೇಳಿದರು.

ಅಪಮಾನಗಳನ್ನು ಸಹಿಸಿದ್ದೇನೆ, ಎದುರಿಸಿದ್ದೇನೆ. ಅಪಾರ ಕಾರ್ಯಕರ್ತರ ಜತೆ ಎಲ್ಲ ನೋವುಗಳನ್ನು ನುಂಗಿದ್ದೇನೆ ಎಂದ ಹೆಚ್.ಡಿ ದೇವೇಗೌಡರು, ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023 ರಲ್ಲಿ ಉತ್ತರ ನೀಡೋಣ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ವೇದಿಕೆಯಲ್ಲಿದ್ದರು. ಇದೇ ವೇಳೆ ಮಾಜಿ ಶಾಸಕ ವೈಎಸ ವಿ ದತ್ತ ಅವರು ‘ ಪಕ್ಷ ಸಂಘಟನೆ ಹಾಗೂ ಪಕ್ಷದ ಪರಂಪರೆ ಎಂಬ ವಿಷಯದ ಬಗ್ಗೆ ಮಾತನಾಡಿದರು.

ಪಕ್ಷದ ಹಾಲಿ ಶಾಸಕರು, ಮಾಜಿ ಶಾಸಕರು, ಹಿಂದಿನ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅಭ್ಯರ್ಥಿಗಳು, ಮಾಜಿ ಸಚಿವರು ಸೇರಿದಂತೆ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಿದ್ದರು.

Key words: Siddaramaiah- cannot- finish- JDS-Former Prime Minister -HD Deve Gowda

ENGLISH SUMMARY..

“Siddaramaiah can’t drown JDS”- Former PM H.D.Devegowda roars
Bengaluru, September 27, 2021 (www.justkannada.in): “Nobody can finish JDS party which has made its place in the hearts of millions of Kannadigas,” opined JDS National President and former Prime Minister H.D. Devegowda.
He inaugurated the 4-day duration ‘Janata Parva 1.0’ workshop that commenced at the Bidadi farm house. The program is organized to strengthen the party and form the government under the leadership of H.D. Kumaraswamy by the year 2023.
He expressed his ire on former Chief Minister Siddaramaiah for defaming JDS. However, he said he and his party would give a befitting reply in the 2023 elections.
About 200 representatives, including present MLAs of the party, former MLAs, candidates who had lost in the last elections, former ministers are participating in the program.
Keywords: JDS/ Former PM/ H. D. Devegowda/ Siddaramaiah/ can’t finish JDS/ workshop