ಮೈಸೂರು,ನವೆಂಬರ್,25,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾಯ್ತು. ಈಗ ಸಿಎಂ ಸಿದ್ದರಾಮಯ್ಯ ಪರ ಅಯ್ಯಪ್ಪ ಮಾಲಧಾರಿಗಳು ಬ್ಯಾಟಿಂಗ್ ಬೀಸಿದ್ದಾರೆ.
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಲೆಂದು ಅಯ್ಯಪ್ಪ ಮಾಲಾಧಾರಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಭಾವಚಿತ್ರ ಹಿಡಿದು ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆ ಏರಿದ್ದಾರೆ. ನಂಜನಗೂಡು ತಾಲ್ಲೂಕಿನ ಮರಡಿಹುಂಡಿ ಗ್ರಾಮದ ಮಾಲಾಧಾರಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ.
ಮರಡಿಹುಂಡಿ ಗ್ರಾಮದಿಂದ ಕೇರಳದ ಶಬರಿಮಲೆಗೆ ಅಯ್ಯಪ್ಪ ಮಾಲಾಧಾರಿಗಳು ಹೋಗಿದ್ದು, ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸಲೆಂದು ಪೂಜೆ ಸಲ್ಲಿಸಿದ್ದು, ಸಿದ್ದರಾಮಯ್ಯ ರಾಜಕೀಯ ಜೀವನ ಸುಗಮವಾಗಲಿ, ಅಡೆತಡೆಗಳು ದೂರವಾಗಲೆಂದು ಅಯ್ಯಪ್ಪನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
Key words: Prayers, pujas, Ayyappa, devotees, Siddaramaiah, continues, CM







