ರಾಜ್ಯದ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆ – ಕೆ.ಸಿ ವೇಣುಗೋಪಾಲ್ ಅಧಿಕೃತ ಘೋಷಣೆ.

ನವದೆಹಲಿ,ಮೇ,18,2023(www.justkannada.in):  ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ರನ್ನ ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಇಂದು ಎಐಸಿಸಿ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆ.ಸಿ ವೇಣುಗೋಪಾಲ್,  ಭಾರತ್ ಜೋಡೊ ಪಾದಯಾತ್ರೆ ಬಳಿಕ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ,  ರಾಹುಲ್ ಗಾಂಧಿ ಸೇರಿ ಎಲ್ಲಾ ಹಿರಿಯ ನಾಯಕರಿಗೂ ಸಲ್ಲುತ್ತದೆ,  ಕಾಂಗ್ರೆಸ್ ಅನ್ನೋದು ಪ್ರಜಾಪ್ರಭುತ್ವದ ಪಕ್ಷ. ಕರ್ನಾಟಕ ಕಾಂಗ್ರೆಸ್ ನಲ್ಲಿ ಸಮರ್ಥ ನಾಯಕರಿದ್ದಾರೆ. ಡಿಕೆ ಶಿವಕುಮಾರ್ ಪಕ್ಷ ಸಂಘಟನೆ ಮಾಡಿದ್ದಾರೆ.  ಸಿಎಂ ಆಯ್ಕೆಗೆ ಎಲ್ಲಾ ರೀತಿಯಲ್ಲೂ ಪ್ರಯತ್ನ ಮಾಡಿದ್ದೇವೆ. ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಒಳ್ಳೆಯ ಜೋಡಿಯಾಗಿ ಕೆಲಸ ಮಾಡಿದ್ದಾರೆ. ಇಬ್ಬರ ಸಮ್ಮುಖದಲ್ಲಿ  ಅಭಿವೃದ್ದಿ ಕೆಲಸಗಳಾಗಲಿವೆ ಎಂದರು.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಆಯ್ಕೆ ಮಾಡಲಾಗಿದ್ದು   ಮೇ 20 ಮಧ್ಯಾಹ್ನ 12.30ಕ್ಕೆ  ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಸಿಎಂ ಮತ್ತು ಡಿಸಿಎಂ ಜೊತೆ ಕೆಲ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಮುಂದುವರೆಯಲಿದ್ದಾರೆ ಎಂದರು.

Key words: Siddaramaiah – CM – DK Shivakumar – DCM – KC Venugopal -official -announcement.