ಮೈತ್ರಿ ಕಾಪಾಡಿಕೊಳ್ಳುವಲ್ಲಿ ಸಿದ್ದರಾಮಯ್ಯ ,ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಫಲ- ಬಿಜೆಪಿ ಸೇರ್ಪಡೆ ಕುರಿತು ಶಾಸಕ ಹೆಚ್.ವಿಶ್ವನಾಥ್ ಏನಂದ್ರು…?

ನವದೆಹಲಿ,ಜು,3,2019(www.justkannada.in)  ಮೈತ್ರಿ ಕಾಪಾಡಿಕೊಳ್ಳುವಲ್ಲಿ ಹೆಚ್.ಡಿ ಕುಮಾರಸ್ವಾಮಿ,  ಸಿದ್ದರಾಮಯ್ಯ ವಿಫಲರಾಗಿದ್ದಾರೆ. ಅತೃಪ್ತ ಶಾಸಕರನ್ನ ಸಮಾಧಾನ ಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಜೆಡಿಎಸ್ ಶಾಸಕ ಹೆಚ್.ವಿಶ್ವನಾಥ್ ಹೇಳಿದರು.

ಇಂದು ನವದೆಹಲಿಯಲ್ಲಿ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಜತೆ ಹೆಚ್.ಡಿ ವಿಶ್ವನಾಥ್ ಉಪಹಾರ ಸೇವನೆ ಮಾಡಿದರು. ಈ ವೇಳೆ ಸಂಸದ ಜಿ.ಎಸ್ ಬಸವರಾಜು, ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಉಪಸ್ಥಿತರಿದ್ದರು.

ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ವಿಶ್ವನಾಥ್,ಮೈತ್ರಿ ಸರ್ಕಾರ ಮುಂದುವರೆಸಲು ಸಿದ್ದರಾಮಯ್ಯಗೆ ಆಸಕ್ತಿ ಇಲ್ಲ ಅನ್ನಿಸುತ್ತಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.  ಸಿದ್ದರಾಮಯ್ಯಗೆ ವಿಪಕ್ಷ ನಾಯಕನಾಗುವ ಆಸೆ ಇರಬೇಕು. ಸಮ್ಮಿಶ್ರ ಸರ್ಕಾರದ ವಿರುದ್ದ ಶಾಸಕರು ಅತೃಪ್ತಗೊಂಡಿದ್ದಾರೆ. ಅತೃಪ್ತ ಶಾಸಕರನ್ನ ಸಮಾಧಾನ ಪಡಿಸುತ್ತಿಲ್ಲ. ಸಮಾಧಾನಪಡಿಸುವ ಜವಾಬ್ದಾರಿಯನ್ನೂ ತೆಗೆದುಕೊಂಡಿಲ್ಲ.ರಾಜ್ಯ ರಾಜಕೀಯ ಅರಾಜಕತೆಯಿಂದ ಕೂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್, ಇಂದು ಬಿಜೆಪಿ ನಾಯಕರ ಜತೆ ಸೇರಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ನಾನು ಬಿಜೆಪಿಗೆ ಹೋಗುವುದಾದರೇ ಮಾಧ್ಯಮದವರಿಗೆ ತಿಳಿಸಿಯೇ ಹೋಗುತ್ತೇನೆ ಎಂದು ವಿಶ್ವನಾಥ್ ಹೇಳಿದರು.

key words: Siddaramaiah- CM HD Kumaraswamy- unsuccessful – maintaining- alliance-H.Vishwanath