ಸಿದ್ಧರಾಮಯ್ಯ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಘಟಾನುಘಟಿ ನಾಯಕರಿಗೆ ಆಹ್ವಾನ ಸಾಧ್ಯತೆ.

ಬೆಂಗಳೂರು,ಮೇ,18,2023(www.justannada.in): ರಾಜ್ಯದ ನೂತನ ಸಿಎಂ ಆಗಿ ಸಿದ‍್ಧರಾಮಯ್ಯ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದು ಮೇ 20 ರಂದು ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಘಟಾನುಘಟಿ ನಾಯಕರನ್ನ ಆಹ್ವಾನಿಸುವ ಸಾಧ್ಯತೆ ಇದೆ.

ಮೇ20 ಶನಿವಾರ ಮಧ್ಯಾಹ್ನ 12.30ಕ್ಕೆ ನೂತನ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ., ಈ ಕಾರ್ಯಕ್ರಮಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್,  ಛತ್ತೀಸ್ ಘಡ  ಸಿಎಂ ಭೂಪೇಶ್ ಬಘೇಲ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿಲ್,  ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್,  ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಲೇ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ  ಕಂಠೀರವ ಸ್ಟೇಡಿಯಂನಲ್ಲಿ ಭರ್ಜರಿ ಸಿದ‍್ಧತೆ ನಡೆಸಲಾಗುತ್ತಿದ್ದು, ಸಿದ್ಧರಾಮಯ್ಯಗೆ ಅಭಿನಂದನೆ ಸಲ್ಲಿಸುವ ಕಟೌಟ್ ಗಳನ್ನ  ಹಾಕುತ್ತಿದ್ದಾರೆ.

Key words: Siddaramaiah-CM- swearing-ceremony – invite – leaders.