ದೆಹಲಿಗೆ ತೆರಳಿದ ಸಿದ್ದರಾಮಯ್ಯ ಮತ್ತು  ಡಿಕೆ ಶಿವಕುಮಾರ್​.

ಬೆಂಗಳೂರು,ಮೇ,19,2023(www.justkannada.in):  ನಿಯೋಜಿತ ಸಿಎಂ ಸಿದ್ಧರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ಹೆಚ್ಎಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ್ದಾರೆ.

ಸಿಎಂ ಹುದ್ದೆಗೆ ಡಿ.ಕೆ ಶಿವಕುಮಾರ್ ಮತ್ತು ಸಿದ್ಧರಾಮಯ್ಯ ನಡುವೆ ಭಾರಿ ಪೈಪೋಟಿ ಉಂಟಾಗಿ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿ ಉಳಿದಿತ್ತು. ಕಾಂಗ್ರೆಸ್ ಹೈಕಮಾಂಡ್ ಸಭೆಗಳ ಮೇಲೆ ಸಭೆ ನಡೆಸಿ ಕೊನೆಗೂ ಡಿ.ಕೆ ಶಿವಕುಮಾರ್ ಮನವೊಲಿಸಿ ಬಿಕ್ಕಿಟ್ಟು ಬಗೆಹರಿಸಿ  ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಹೆಸರನ್ನ ನಿನ್ನೆ ಅಧಿಕೃತವಾಗಿ ಘೋಷಣೆ ಮಾಡಿತ್ತು.

ಬಳಿಕ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದರು. ಇದೀಗ ಮತ್ತೆ ದೆಹಲಿಗೆ ತೆರಳಿದ್ದಾರೆ.  ಸಂಪುಟ ರಚನೆ ಕಸರತ್ತು ನಡೆದಿದ್ದು, ಸಚಿವ ಆಕಾಂಕ್ಷಿಗಳ ಪಟ್ಟಿ ಹಿಡಿದು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ನಾಳೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು ರಾಷ್ಟ್ರೀಯ ನಾಯಕರಿಗೆ ಆ‍ಹ್ವಾನ ನೀಡಲಿದ್ದಾರೆ.

Key words: Siddaramaiah – DK Shivakumar -Delhi.