Friday, September 18, 2026

BDA Apartments

ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷ ಬಿಡ್ತಾರೆ- ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ…...
Home Front Page ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷ ಬಿಡ್ತಾರೆ- ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ…

ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷ ಬಿಡ್ತಾರೆ- ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ…

ದಾವಣಗೆರೆ,ಅ,30,2019(www.justkannada.in):  ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನ ಬಿಡ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ದಾವಣಗೆರೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ನಲ್ಲಿ ಒಳಜಗಳ ಶುರುವಾಗಿದೆ.  ಆ ಪಕ್ಷದಿಂದ ಸಿದ್ಧರಾಮಯ್ಯ ಹೊರ ಬರುತ್ತಾರೆ. ಇಲ್ಲದಿದ್ದರೇ ಸಿದ್ದರಾಮಯ್ಯರನ್ನ ಕಾಂಗ್ರೆಸ್ ನಿಂದ ಹೊರ ಹಾಕುತ್ತಾರೆ ಎಂದು ಹೇಳಿದರು.

ಇನ್ನು ಸಿದ್ಧರಾಮಯ್ಯ ವಿಪಕ್ಷ ನಾಯಕರಾಗಿಯೇ ಉಳಿಯುತ್ತಾರೆ ಎಂಬ ಬಿಎಸ್ ಯಡಿಯೂರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಸ್ ಈಶ್ವರಪ್ಪ,  ಬಿಎಸ್ ಯಡಿಯೂರಪ್ಪ ಹೇಳಿದ್ದು ಸುಳ್ಳು. ಕೆಲದಿನಗಳವರೆಗೆ ಇರಬಹುದು. ಆದರೆ ಸಿದ್ಧರಾಮಯ್ಯ ವಿರೋಧ ಪಕ್ಷದ ನಾಯಕನಾಗಲು ಅಸಮರ್ಥ ಎಂದು ನುಡಿದರು.

Key words: Siddaramaiah –leave-congress Party – minister- K.S Eshwarappa-davanagere